ಪೊಲೀಸ್ ನೇಮಕಾತಿ ಪರೀಕ್ಷೆ: ಕರೆಪತ್ರ ಡೌನ್ಲೋಡ್ ಗೆ ಲಭ್ಯ

ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಿವಿಲ್ ಮತ್ತು ಗುಪ್ತದಳದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ 13 ಪರೀಕ್ಷಾ ಕೇಂದ್ರಗಳಲ್ಲಿ ಸೆ.17 ರಂದು ಲಿಖಿತ ಪರೀಕ್ಷೆಗಳು ನಡೆಯಲಿವೆ.

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 17 ರಂದು ಪರೀಕ್ಷೆಗಳಿ ನಡೆಯಲಿದ್ದು ಕರೆ ಪತ್ರ ಪಡೆಯಲು ಸೂಚಿಸಲಾಗಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಿವಿಲ್ ಮತ್ತು ಗುಪ್ತದಳದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ 13 ಪರೀಕ್ಷಾ ಕೇಂದ್ರಗಳಲ್ಲಿ ಸೆ.17 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಹಾಗೂ ಮಧ್ಯಾಹ್ನ 2 ರಿಂದ 3.30 ರವರೆಗೆ ಲಿಖಿತ ಪರೀಕ್ಷೆಗಳು ನಡೆಯಲಿವೆ.

ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ಮೂಲಕ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಪೊಲೀಸ್ ನೇಮಕಾತಿ ಪರೀಕ್ಷೆ

ಕರೆಪತ್ರ ಡೌನ್ಲೋಡ್ ಮಾಡಿಕೊಳ್ಳುವ ವಿಧಾನ

  • ಅಧಿಕೃತ ವೆಬ್‍ಸೈಟ್ ಗೆ ಭೇಟಿ ನೀಡಿ
  • My Application ನ್ನು ಕ್ಲಿಕ್ ಮಾಡಿ
  • ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
  • ಕರೆ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ

ಅಭ್ಯರ್ಥಿಗಳಿಗೆ ಕರೆ ಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್‍ ಮೂಲಕವೇ ಪಡೆಯಬೇಕು. ಕರೆ ಪತ್ರವಿಲ್ಲದೆ ಹಾಜರಾಗುವ ಅಭ್ಯರ್ಥಿಗಳಿಗೆ ಪರಿಕ್ಷೆಗೆ ಅನುವು ಮಾಡಲಾಗುವುದಿಲ್ಲ.

ಕರೆಪತ್ರದ ಜೊತೆಗೆ ಈ ಕೆಳಗಿನ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು ಮತ್ತು ಅದರ ಒಂದು ದೃಢೀಕೃತ ಪ್ರತಿಯನ್ನು ನೀಡುವುದು.

  • ಪಾಸ್‍ಪೋರ್ಟ್
  • ಚಾಲನಾ ಪರವಾನಗಿ ಪತ್ರ ((Driving License)
  • ಪ್ಯಾನ್ ಕಾರ್ಡ್ (PAN Card)
  • ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ (Service ID Card)
  • ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಛೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ (Bank Pass Book with Photograph)
  • ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಪುಸ್ತಕ (Pattas and registered deeds with Photograph)
  • ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ(Community Certificate with Photo)
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ / ಪಿಂಚಣಿ ಮಂಜೂರಾತಿ ಆಗಿರುವ ಆದೇಶ (Ex-servicemen's pension book/pension payment order)
  • ಎನ್.ಆರ್.ಇ.ಜಿ.ಎಸ್.ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ. (Job cards with Photograph
  • ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ (EPIC).
  • ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್.(AADHAR CARD)

ಕರೆಪತ್ರದ ಜೊತೆಗೆ ಆನ್-ಲೈನ್ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ಸಹ ತರತಕ್ಕದ್ದು, ತಪ್ಪಿದ್ದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದರೆ ಅಂತಹವರನ್ನು ಅನರ್ಹ ಗೊಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka state police sub inspector recruitment examination on September 17. admission tickets are available for download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X