ಆರ್ ಬಿಐ 2019 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ಪರೀಕ್ಷೆಯಪ್ರವೇಶ ಪತ್ರ ಬಿಡುಗಡೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2019 ಭಾರತದೆಲ್ಲೆಡೆ ಒಟ್ಟು 24 ಜ್ಯೂನಿಯರ್ ಇಂಜಿನಿಯರ್(ಸಿವಿಲ್) ಮತ್ತು ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ದಿನಾಂಕ 7.1.2019 ರಂದು ಪ್ರಕಟಣೆ ಹೊರಡಿಸಿತ್ತು.ಇದೀಗ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಭಾಗವಹಿಸಬೇಕಿದ್ದು ಪ್ರವೇಶ ಪತ್ರ ಪ್ರಕಟಗೊಂಡಿದೆ.

ಆರ್ ಬಿಐ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

 

ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡುವುದಾಗಿ ಆರ್ ಬಿಐ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಅದೇ ರೀತಿಯಾಗಿ ಅಭ್ಯರ್ಥಿಗಳು ಈಗ ಆನ್ ಲೈನ್ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆರ್ ಬಿಐ ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರವನ್ನು ಪಡೆಯಬಹುದು.

ಆನ್ ಲೈನ್ ಪರೀಕ್ಷೆಯು ಅಭ್ಯರ್ಥಿಗಳ ಸಾಮಾನ್ಯ ಜ್ಞಾನ, ನ್ಯೂಮರಿಕಲ್ ಎಬಿಲಿಟಿ ಮತ್ತು ಭಾಷಾ ಪ್ರಾವೀಣ್ಯತಾ ಜ್ಞಾನವನ್ನು ಪರೀಕ್ಷಿಸುವಂತಹ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷಾ ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುತ್ತದೆ ಹಾಗಾಗಿ ಅಭ್ಯರ್ಥಿಗಳು ವೆಬ್ ಸೈಟ್ ಅನ್ನು ಪರಿಶೀಲಿಸುತ್ತಿರತಕ್ಕದ್ದು.

ಆರ್ ಬಿಐ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ಪ್ರವೇಶ ಪತ್ರ ಡೌನ್ ಲೋಡ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಅನುಸರಿಸಿ

ಸ್ಟೆಪ್ 1: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಹೋಗಿ

ಸ್ಟೆಪ್ 2: ನಂತರ ಅಲ್ಲಿ ನೀಡಲಾಗಿರುವ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಯ ವಿವರದ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ ಅಭ್ಯರ್ಥಿಗಳು ಅಲ್ಲಿ ಕೇಳಿರುವಂತೆ ನಿಮ್ಮ ರಿಜಿಸ್ಟಾರ್ ನಂಬರ್, ಪಾಸ್ ವರ್ಡ್ ಅನ್ನು ಫಿಲ್ ಮಾಡಿ

ಸ್ಟೆಪ್ 4: ಪರದೆಯ ಮೇಲೆ ಕಾಣಿಸುವ ಪ್ರವೇಶ ಪತ್ರವನ್ನು ಸೇವ್ ಮಾಡಿಕೊಂಡು ಒಂದು ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಒಯ್ಯತಕ್ಕದ್ದು, ಇಲ್ಲವಾದಲ್ಲಿ ಅವರನ್ನು ಪರೀಕ್ಷೆಗೆ ಹಾಜರುಪಡಿಸಲು ಸಾಧ್ಯವಿರುವುದಿಲ್ಲ. ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ ಸೈಟ್ ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ಆರ್ ಬಿ ಐ ನೇಮಕಾತಿ 2019 : 24 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Reserve Bank Of India Recruitment 2019 released the admit card for Junior Engineer entrance exam
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more