UPSC CAPF 2020 Notification Released: ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ ಪರೀಕ್ಷೆಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ (ಯು.ಪಿ.ಎಸ್,ಸಿ) ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ (ಸಿಎಪಿಎಫ್) ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು 209 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷೆಗೆ ಕೇಳಲಾಗಿರುವ ಸಂಪೂರ್ಣ ಅರ್ಹತೆಗಳ ವಿವರವನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್ಸಿ ಸಿಎಪಿಎಫ್ ಪರೀಕ್ಷೆಗೆ ಸೆ.7ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ (ಸಿಎಪಿಎಫ್) ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಆಗಸ್ಟ್ 1,2020ರ ಅನ್ವಯ 20 ರಿಂದ ಗರಿಷ್ಟ 25 ವರ್ಷ ವಯೋಮಿತಿಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು ವರ್ಗಗಳಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಎಸ್.ಟಿ/ಎಸ್.ಸಿ ಅಭ್ಯರ್ಥಿಗಳಿಗೆ 05 ವರ್ಷ, ಒ.ಬಿ.ಸಿ ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಮಹಿಳೆ/ಎಸ್.ಟಿ/ಎಸ್.ಸಿ ಮತ್ತು ಅಂಗವಿಕಲ ಅಭ್ಯರ್ಥಿಗಳನ್ನು ಹೊರತು ಪಡಿಸಿ ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.200 /- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಎಸ್‌ಬಿಐ ಶಾಖೆಯಲ್ಲಿ ಅಥವಾ ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಸೆಪ್ಟೆಂಬರ್ 7,2020ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಯುಪಿಎಸ್ಸಿ ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ (ಸಿಎಪಿಎಫ್) ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC CAPF (ACs) exam notification has been released for the recruitment of 209 posts. Interested candidates can apply before September 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+