ಕೇಂದ್ರ ನಾಗರಿಕ ಸೇವಾ ಆಯೋಗವು 2019ನೇ ಸಾಲಿನಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. ಕೇಂದ್ರ ನಾಗರಿಕ ಸೇವಾ ಆಯೋಗದ ಪರೀಕ್ಷೆಗಳನ್ನು ಬರೆದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಪಟ್ಟಿ ಮಾಡಲಾಗಿದೆ. ಈ ಪಟ್ಟಿಯನ್ನು ಆಧರಿಸಿ ಮುಂದಿನ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಶಿಫಾರಸ್ಸು ಕಳುಹಿಸಲಾಗುತ್ತದೆ.
ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆ-2019ರ ಫಲಿತಾಂಶವನ್ನು ವೀಕ್ಷಿಸಲು ಈ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1. ಯುಪಿಎಸ್ ಸಿಯ ಅಧಿಕೃತ ವೆಬ್ ಸೈಟ್ upsc.gov.in ಗೆ ಭೇಟಿ ನೀಡಿ
ಸ್ಟೆಪ್ 2. ಯುಪಿಎಸ್ಸಿ 2019ರ ಫಲಿತಾಂಶದ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3. ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಅನ್ನು ನಮೂದಿಸಿ
ಸ್ಟೆಪ್ 4. ನಿಮ್ಮ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2019 ಫಲಿತಾಂಶವನ್ನು ಪರದೆಯ ಮೇಲೆ ತೋರಿಸಲಾಗುತ್ತದೆ
ಸ್ಟೆಪ್ 5. ಅಭ್ಯರ್ಥಿಗಳು ಫಲಿತಾಂಶದ ಮುದ್ರಣವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಯುಪಿಎಸ್ಸಿ 2019ರ ಟಾಟ್ 3 ಅಭ್ಯರ್ಥಿಗಳು ಯಾರು ?:
ಪ್ರದೀಪ್ ಸಿಂಗ್ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆ-2019ರಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಜತಿನ್ ಕಿಶೋರ್ ಮತ್ತು ಪ್ರತಿಭಾ ವರ್ಮಾ ಕ್ರಮವಾಗಿ 2 ಮತ್ತು 3 ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಬಾರಿ ನೇಮಕಾತಿಗಾಗಿ ಆಯ್ಕೆಯಾದ 829 ಜನರಲ್ಲಿ 304 ಮಂದಿ ಸಾಮಾನ್ಯ ವರ್ಗ, ಮತ್ತು 78 ಮಂದಿ ಆರ್ಥಿಕವಾಗಿ ಹಿಂದುಳಿದ ವರ್ಗದವರು, 251 ಮಂದಿ ಇತರ ಹಿಂದುಳಿದ ವರ್ಗದವರು (ಒಬಿಸಿ), 129 ಪರಿಶಿಷ್ಟ ಜಾತಿ ಮತ್ತು 67 ಮಂದಿ ಪರಿಶಿಷ್ಟ ಪಂಗಡದವರಿದ್ದಾರೆ.