UPSC IES 2020 Notification Released: ಇಂಡಿಯನ್ ಎಕಾನಾಮಿಕಲ್ ಸರ್ವಿಸ್ ಪರೀಕ್ಷೆಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ (ಯು.ಪಿ.ಎಸ್,ಸಿ) ಇಂಡಿಯನ್ ಎಕಾನಾಮಿಕಲ್ ಸರ್ವಿಸ್ (ಐ,ಇ.ಎಸ್) ಮತ್ತು ಇಂಡಿಯನ್ ಸ್ಟಾಟಿಸ್ಟಿಕಲ್ ಸರ್ವಿಸ್ ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಪರೀಕ್ಷೆಗೆ ಕೇಳಲಾಗಿರುವ ಸಂಪೂರ್ಣಗಳ ಅರ್ಹತೆಗಳ ವಿವರವನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್ಸಿ ಇಂಡಿಯನ್ ಎಕನಾಮಿಕಾಲ್ ಸರ್ವಿಸ್ ಪರೀಕ್ಷೆಗೆ ಸೆ.1ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಇಂಡಿಯನ್ ಎಕಾನಾಮಿಕಲ್ ಸರ್ವಿಸ್ (ಐ,ಇ.ಎಸ್) ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಆಗಸ್ಟ್ 1,2020ರ ಅನ್ವಯ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು ವರ್ಗಗಳಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಎಸ್.ಟಿ/ಎಸ್.ಸಿ ಅಭ್ಯರ್ಥಿಗಳಿಗೆ : 05 ವರ್ಷ ಒ.ಬಿ.ಸಿ ಅಭ್ಯರ್ಥಿಗಳಿಗೆ : 03 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಮಹಿಳೆ/ಎಸ್.ಟಿ/ಎಸ್.ಸಿ ಮತ್ತು ಅಂಗವಿಕಲ ಅಭ್ಯರ್ಥಿಗಳನ್ನು ಹೊರತು ಪಡಿಸಿ ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.200 /- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಪಟ್ಯಾಲ, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಬ್ಯಾಂಕ್ನ ನಯಾವುದೇ ಶಾಖೆಯಲ್ಲಿ ಚಲನ್ ಮೂಲಕ ಅಥವಾ ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಸೆಪ್ಟೆಂಬರ್ 1,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಯುಪಿಎಸ್ಸಿ ಐಇಎಸ್ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UPSC IES Exam notification 2020 released in offiicial website. Interested candidates can apply through online before September 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X