
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಾಕಿ ಉಳಿದಿರುವ ಸೆಮಿಸ್ಟರ್ ಪರೀಕ್ಷೆಗಳನ್ನು ಜುಲೈ 26 ರಿಂದ ಪ್ರಾರಂಭಿಸಲು ಮುಂದಾಗಿದೆ. ಬಾಕಿ ಉಳಿದ ಪರೀಕ್ಷೆಗಳ ವೇಳಾಪಟ್ಟಿಯನ್ನು ವಿಟಿಯು ಅತೀ ಶೀಘ್ರದಲ್ಲಿ ಪ್ರಕಟಿಸಲಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ವರದಿ ಸಲ್ಲಿಸಬೇಕಿದ್ದು, ಸಿಡಿ ಮೂಲಕ ಪ್ರಾಜೆಕ್ಟ್, ಸೆಮಿನಾರ್ ವರದಿ ಸಲ್ಲಿಸಬೇಕಿದೆ.
ಪ್ರಥಮ ಸೆಮಿಸ್ಟರ್ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಜುಲೈ 19ರಿಂದ ಅಧ್ಯಯನಕ್ಕಾಗಿ ರಜೆಯನ್ನು ಘೋಷಿಸಲಾಗಿದೆ. ಪ್ರಾಯೋಗಿಕ ಪರೀಕ್ಷೆಗಳ ಬಳಿಕ 2ನೇ ಸೆಮಿಸ್ಟರ್ ಆರಂಭವಾಗಲಿದ್ದು, ಅಟಾನಮಸ್ ಕಾಲೇಜುಗಳಿಗೆ ಈ ನಿಯಮ ಅನ್ವಯವಾಗಲಿದೆ. ಈ ಕುರಿತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸುತ್ತೋಲೆ ಪ್ರಕಟಿಸಿದೆ.
ರಾಜ್ಯದಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿತ್ತು, ಹಾಗೆ ಕೆಲವು ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ವಿಟಿಯು ಕೂಡ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ಇದೀಗ ಪರೀಕ್ಷೆಗಳನ್ನು ಜುಲೈ 26ರಿಂದ ಪ್ರಾರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ.


Click it and Unblock the Notifications











