15000 Primary School Teachers Recruitment : ನೇಮಕಾತಿ ಅಧಿಸೂಚನೆ ಮಾ.21ರಂದು ಪ್ರಕಟ : ಶಿಕ್ಷಣ ಸಚಿವ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರ ಕೊರತೆ ನೀಗಿಸಲು 15,000 ಶಿಕ್ಷಕರ ನೇಮಕಾತಿ ಅಧಿಸೂಚನೆಯನ್ನು ಮಾರ್ಚ್ 21ರಂದು ಹೊರಡಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

 
ಕರ್ನಾಟಕ ಸರ್ಕಾರಿ ಶಾಲೆಗಳಿಗೆ 15000 ಶಿಕ್ಷಕರ ನೇಮಕಾತಿ ಅಧಿಸೂಚನೆ ಮಾ.21ರಂದು ಪ್ರಕಟ

ಈ ಕುರಿತು ಟ್ವೀಟ್ ಮಾಡಿರುವ ಅವರು ಶಿಕ್ಷಕರ ನೇಮಕಾತಿ ಅಧಿಸೂಚನೆ ದಿನಾಂಕ, ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕಗಳು ಮತ್ತು ಸಿಇಟಿ ಪರೀಕ್ಷಾ ದಿನಾಂಕಗಳನ್ನು ಘೋಷಿಸಿದ್ದಾರೆ.

ಈ ಮುಂಚೆ ಶಿಕ್ಷಕರ ಕೊರತೆ ನೀಗಿಸಲು 15,000 ಶಿಕ್ಷಕರ (6-8) ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲಿ ಪ್ರಕಟ ಮಾಡಲಾಗುತ್ತದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೂ ಕಲ್ಯಾಣ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 5,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದರು. ಅದರ ಅನ್ವಯ ಇದೀಗ ಮಾರ್ಚ್ 21ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುತ್ತಿದೆ.

ಸದರಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕ (6ರಿಂದ 8) ವೃಂದದ 5,000 ಹುದ್ದೆಗಳು ಹಾಗೂ ಉಳಿಕೆ ವೃಂದದ 10 ಸಾವಿರ ಒಟ್ಟಾರೆ 15,000 ಹುದ್ದೆಗಳನ್ನು ಜಿಲ್ಲಾವಾರು ಹುದ್ದೆಗಳ ಮರು ಹಂಚಿಕೆ ಉಲ್ಲೇಖ 02 ಏಕ ಕಡತದಲ್ಲಿ ಅನುಮೋದನೆ ಕೋರಿ ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ನಿರೀಕ್ಷಿಸಿದೆ. ಸರ್ಕಾರದ ಅನುಮೋದನೆಯನ್ನು ನಿರೀಕ್ಷಿಸಿ ಪ್ರಸ್ತುತ ಜಿಲ್ಲಾವಾರು/ವಿಷಯವಾರು ಹುದ್ದೆಗಳ ಜಿಲ್ಲಾ ಹಂಚಿಕೆಯನ್ನು ಅನುಬಂಧದಲ್ಲಿ ಲಗತ್ತಿಸಿದೆ.

ಕರ್ನಾಟಕ ಸರ್ಕಾರಿ ಶಾಲೆಗಳಿಗೆ 15000 ಶಿಕ್ಷಕರ ನೇಮಕಾತಿ ಅಧಿಸೂಚನೆ ಮಾ.21ರಂದು ಪ್ರಕಟ

ಜಿಲ್ಲೆಗಳಿಗೆ ಹಂಚಿಕೆ ಮಾಡಲಾದ ವಿಷಯವಾರು/ಹುದ್ದೆಗಳಿಗೆ ಅನುಗುಣವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಕಚೇರಿಯ ನೋಡಲ್ ಅಧಿಕಾರಿ ಹಾಗೂ ವಿಷಯ ನಿರ್ವಾಹಕರ ಸಭೆಯನ್ನು ಆಯೋಜಿಸಿ, ಸಂಬಂಧಪಟ್ಟ ಜಿಲ್ಲೆಗಳಿಂದ ಸೀಟ್ ಮ್ಯಾಟ್ರಿಕ್ಸ್ ಪಡೆದು ಅತಿ ಶೀಘ್ರವಾಗಿ ಜಿಲ್ಲಾವಾರು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವ ಸಂಬಂಧ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್. ಆರ್ ಪತ್ರ ಹೊರಡಿಸಿದ್ದಾರೆ.

 

6 ರಿಂದ 8ನೇ ತರಗತಿವರೆಗಿನ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮಾರ್ಚ್ 23,2022 ರಿಂದ ಏಪ್ರಿಲ್ 22,2022ರ ವರೆಗೆ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಮೇ ತಿಂಗಳ 21 ಮತ್ತು 22,2022ರಂದು ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ. ಅಧಿಸೂಚನೆ ಪ್ರಕಟವಾದ ಕೂಡಲೇ ವಿದ್ಯಾರ್ಹತೆ, ವೇತನ ಮತ್ತು ಅರ್ಜಿ ಸಲ್ಲಿಕೆ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುತ್ತದೆ. ನೇಮಕಾತಿ ಬಗೆಗೆ ಹೆಚ್ಚಿನ ಮಾಹಿತಿ ಪಡೆಯಲು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡತಕ್ಕದ್ದು.

For Quick Alerts
ALLOW NOTIFICATIONS  
For Daily Alerts

English summary
15000 Primary school Teachers recruitment 2022: Karnataka Government to Issue Notification on March 21. Here is the complete details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X