ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ವಿವಿಧ ಹುದ್ದೆಗಳ ನೇಮಕಾತಿ

ಎಂಜಿನಿಯರ್ ಎಂಜಿನಿಯರ್, ಸೂಪರ್ ವೈಸರ್ ಮತ್ತು ಆಫೀಸರ್ ಸೇರಿದಂತೆ ಒಟ್ಟು 382 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ ಸರ್ಕಾರದ ಅಧೀನದಲ್ಲಿರುವ ದೇಶದ ಪ್ರಮುಖ ವಿದ್ಯುತ್ ವಿತರಣಾ ಸಂಸ್ಥೆ 'ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಂಜಿನಿಯರ್ ಎಂಜಿನಿಯರ್, ಸೂಪರ್ ವೈಸರ್ ಮತ್ತು ಆಫೀಸರ್ ಸೇರಿದಂತೆ ಒಟ್ಟು 382 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪಿಜಿಸಿಐಲ್ ವಿವಿಧ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಎಲೆಕ್ಟ್ರಿಕಲ್ ಫೀಲ್ಡ್ ಇಂಜಿನಿಯರ್-80

ಸಿವಿಲ್ ಫೀಲ್ಡ್ ಎಂಜಿನಿಯರ್ ಹಾಗೂ-42

ಎಲೆಕ್ಟ್ರಿಕಲ್ ಫೀಲ್ಡ್ ಸೂಪರ್ ವೈಸರ್- 192

ಫೀಲ್ಡ್ ಸೂಪರ್ವೈಸರ್ ಸಿವಿಲ್-63

ಇಎಸ್ ಎಂ ಫೀಲ್ಡ್ ಆಫೀಸರ್-05

ವಿದ್ಯಾರ್ಹತೆ

ಸಿವಿಲ್ ಅಥವಾ ಪವರ್ ಎಂಜಿನಿಯರಿಂಗ್ ನಲ್ಲಿ ಬಿಇ/ಬಿಟೆಕ್ ಅಥವಾ ಬಿಎಸ್ಸಿ ಎಂಜಿನಿಯರಿಂಗ್ ವಿದ್ಯಾರ್ಹತೆ ಇರುವ ಅಭ್ಯರ್ಥಿಗಳು ಫೀಲ್ಡ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಫೀಲ್ಡ್ ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಿವಿಲ್ ಅಥವಾ ಎಲೆಕ್ಟ್ರಿಕಲ್ವಿಷಯಗಳಲ್ಲಿ ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿರಬೇಕು.

ಇನ್ನು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ನ್ಯಾಷನಲ್ ರಿಸೋರ್ಸ್ ಮ್ಯಾನೇಜ್ಮೆಂಟ್ ಎನ್ವಿರಾನ್ಮೆಂಟಲ್ ಸೈನ್ಸ್/ಎನ್ವಿರಾನ್ಮೆಂಟಲ್ ಎಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳು ಡಿಸೈನ್ ಎಂಜಿನಿಯರಿಂಗ್, ಕನ್ ಸ್ಟ್ರಕ್ಷನ್, ಟೆಸ್ಟಿಂಗ್-ಕಮೀಷನಿಂಗ್ ಅಥವಾ ಸಿವಿಲ್ ವರ್ಕ್ ನಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಶೇಕಡಾ 55 ಅಂಕಗಳೊಂದಿಗೆ ತೇರ್ಗಡೆಯಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

ಹುದ್ದೆಗಳ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 29 ವರ್ಷ. ಸರ್ಕಾರಿ ನಿಯಮಾನುಸಾರ ಒಬಿಸಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 32 ವರ್ಷ ಹಾಗೂ ಎಸ್ಸಿ/ಎಸ್ಟಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 34 ವರ್ಷ ಎಂದು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆ ದಿನ: ಆಗಸ್ಟ್ 16, 2017

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ

ಫೀಲ್ಡ್ ಎಂಜಿನಿಯರ್ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 400 ರೂ. ಹಾಗೂ ಫೀಲ್ಡ್ ಸೂಪರ್ ವೈಸರ್ ಹುದ್ದೆಗೆ 300 ರೂ. ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ www.powergridindia.com ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Engagement of experienced personnel on contract basis as FIELD ENGINEER(ELECTRICAL & CIVIL), FIELD SUPERVISOR (ELECTRICAL & CIVIL) and FIELDOFFICER (ENVIRONMENT & SOCIAL MANAGEMENT) in NERTS for NERPSIP andCOMPREHENSIVE T&D SCHEME.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X