ಬಳ್ಳಾರಿಯಲ್ಲಿ 47 ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Posted By:

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಬಳ್ಳಾರಿ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಂಬಡ್ತಿ, ವರ್ಗಾವಣೆ ಇನ್ನಿತರೆ ಕಾರಣಗಳಿಂದ 47 ಗ್ರಾಮ ಲೆಕ್ಕಿಗರು ತೆರವಾಗಿದ್ದು, ಖಾಲಿ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಗ್ರಾಮ ಲೆಕ್ಕಿಗ: 47 ಹುದ್ದೆಗಳು
ವೇತನ ಶ್ರೇಣಿ: ರೂ.11600-21000/-

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪಿಯು ಬೋರ್ಡ್ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ದೂರ ಶಿಕ್ಷಣದ ಮೂಲಕ ಪಿಯುಸಿ ಅಥವಾ ಸಮಾನಂತರ ವಿದ್ಯಾರ್ಹತೆ ಹೊಂದಿರುವವರು ಅರ್ಹರಿರುವುದಿಲ್ಲ.

ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು. (ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-(ಬ್ಯಾಂಕ್ ಶುಲ್ಕ ಹೊರತು ಪಡಿಸಿ)
  • ಎಸ್.ಸಿ/ಎಸ್.ಟಿ/ಪ್ರ-1/ಮಹಿಳಾ ಅಭ್ಯರ್ತಿಗಳಿಗೆ ರೂ ರೂ.100/-(ಬ್ಯಾಂಕ್ ಶುಲ್ಕ ಹೊರತು ಪಡಿಸಿ)

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಪಿಯುಸಿ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-10-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-10-2017

ಹೆಚ್ಚಿನ ಮಾಹಿತಿಗಾಗಿ bellary-va.kar.nic.in ಗಮನಿಸಿ

English summary
online applications are invited to fill the 47 village accountant posts in Bellary district.
Please Wait while comments are loading...

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia