ಶೀಘ್ರದಲ್ಲೇ ಜಲಸಂಪನ್ಮೂಲ ಇಲಾಖೆಯಲ್ಲಿ 889 ಇಂಜಿನಿಯರ್ ಗಳ ನೇಮಕಾತಿ

ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಶೀಘ್ರದಲ್ಲೇ ಇಲಾಖೆಯ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು.

ಜಲಸಂಪನ್ಮೂಲ ಇಲಾಖೆಯಲ್ಲಿ ಅತಿ ಶೀಘ್ರದಲ್ಲಿ ಇಂಜಿನಿಯರ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು.

ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಶೀಘ್ರದಲ್ಲೇ ಇಲಾಖೆಯ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು.

ಹುದ್ದೆಗಳ ವಿವರ

ಒಟ್ಟು 500 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿದ್ದು ಇವುಗಳಲ್ಲಿ 429 ಸಿವಿಲ್ ಇಂಜಿನಿಯರ್, 71 ಮೆಕ್ಯಾನಿಕಲ್ ಇಂಜಿನಿಯರ್ ಹುದ್ದೆಗಳಾಗಿವೆ.
ಸ್ಥಳೀಯ ವೃಂಧದಲ್ಲಿ (ಹೈದರಾಬಾದ್-ಕರ್ನಾಟಕ) 100 ಹುದ್ದೆಗಳಿದ್ದು 98 ಸಿವಿಲ್ ಇಂಜಿನಿಯರ್ ಮತ್ತು 2 ಮೆಕ್ಯಾನಿಕಲ್ ಇಂಜಿನಿಯರ್ ಹುದ್ದೆ ಸೇರಿವೆ.

 889 ಇಂಜಿನಿಯರ್ ಗಳ ನೇಮಕಾತಿ

ಜೂನಿಯರ್ ಇಂಜಿನಿಯರ್ ವಿಭಾಗದಲ್ಲಿ ಒಟ್ಟು 289 ಹುದ್ದೆಗಳಿವೆ. ಅವುಗಳಲ್ಲಿ 200 ಸಿವಿಲ್ ಇಂಜಿನಿಯರ್ ಮತ್ತು 159 ಮೆಕ್ಯಾನಿಕಲ್ ಇಂಜಿನಿಯರ್ ಹುದ್ದೆ ಸೇರಿವೆ. ಇವುಗಳಲ್ಲೇ 87 ಸಿವಿಲ್ ಮತ್ತು 2 ಮೆಕ್ಯಾನಿಕಲ್ ಇಂಜಿನಿಯರ್ ಹುದ್ದೆಗಳಿವೆ.

ವಿದ್ಯಾರ್ಹತೆ

ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಿವಿಲ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಗಳಿಸಿರಬೇಕು. ಅಥವಾ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್/ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರೈಸಿರಬೇಕು.

ಜೂನಿಯರ್ ಇಂಜಿನಿಯರ್ ಹುದ್ದೆಗೆ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್/ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರೈಸಿರಬೇಕು.

ವೇತನ ಶ್ರೇಣಿ

ಅಸಿಸ್ಟೆಂಟ್ ಇಂಜಿನಿಯರ್ : ರೂ.22800-43200/-
ಜೂನಿಯರ್ ಇಂಜಿನಿಯರ್ : ರೂ.16000-29600/-

ನೇಮಕಾತಿ

ಗ್ರೂಪ್ ಬಿ ಮತ್ತು ಗ್ರೂಪ್ ಸಿ ಟೆಕ್ನಿಕಲ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. [ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿ]

ಪರೀಕ್ಷಾ ವಿಧಾನ

ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು, ಮೊದಲ ಪತ್ರಿಕೆಯು ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಾಮಾನಗಳ ಕುರಿತಾಗಿ ಇರುತ್ತದೆ. ಎರಡನೇ ಪತ್ರಿಕೆಯು ವಿಷಯಾಧರಿತ ಪತ್ರಿಕೆಯಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ waterresources.kar.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
KARNATAKA WATER RESOURCES DEPARTMENT, RECRUITMENT TO THE CADRE OF ASSISTANT ENGINEERS AND JUNIOR ENGINEERS VERY SOON
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X