ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ 180 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ನೇಮಕಾತಿ ಬಗೆಗಿನ ಸಂಪೂರ್ಣ ವಿವರ ಇಲ್ಲಿದೆ.
ವಿದ್ಯಾರ್ಹತೆ:
ಪದವಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರಿಂದ 15,000/-ರೂ ವೇತನವನ್ನು ನೀಡಲಾಗುವುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನ/ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು 1000/-ರೂ, ಪ.ಜಾ/ಪ.ಪಂ ಅಭ್ಯರ್ಥಿಗಳು 170/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ https://www.aai.aero/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.