AAI Recruitment 2021: 25 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ 25 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅಥವಾ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜುಲೈ 1,2020ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸ್ಟೈಫೆಂಡ್:

ಪದವಿ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ/ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
AAI recruitment 2021 notification has been released for 25 apprentice posts. Interested candidates can apply before March 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X