AAI Recruitment 2022 : ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ 3 ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜುಲೈ 25,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ :

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಜುಲೈ 25,2022ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/- ರಿಂದ 1,00,000/-ರೂ ವೇತನವನ್ನು ನೀಡಲಾಗುವುದು.

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ :

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಸಲಹೆಗಾರ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ :

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.aai.aero/en ಗೆ ಬೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಮತ್ತು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 8 ರಿಂದ ಜುಲೈ 25,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
ED (HR), Recruitment Cell, Airports Authority of India, Rajiv Gandhi Bhawan, Safdarjung Airport, New Delhi - 110003.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Airports authority of india (AAI) recruitment 2022 notification has been released for 3 consultant posts. Interested candidates can apply before July 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X