AHF Recruitment 2022 : 1,419 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆಯು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಇಲಾಖೆಯು 1,419 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆಯಲ್ಲಿ 1,419 ಹುದ್ದೆಗಳ ನೇಮಕಾತಿ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.

AHF ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

AHF ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಮೀನುಗಾರಿಕೆ ಸಹಾಯಕ ನಿರ್ದೇಶಕರು - 188 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕರು - 95 ಹುದ್ದೆಗಳು
ಶೀಘ್ರಲಿಪಿಗಾರ - 11 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕರು - 93 ಹುದ್ದೆಗಳು
ಡೇಟಾ ಎಂಟ್ರಿ ಅಸಿಸ್ಟೆಂಟ್ - 48 ಹುದ್ದೆಗಳು
ಚಾಲಕರು - 41 ಹುದ್ದೆಗಳು
ಮೀನುಗಾರಿಕೆ ಫೀಲ್ಡ್ ಮ್ಯಾನ್ - 475 ಹುದ್ದೆಗಳು
ಕ್ಲರ್ಕ್ - 2 ಹುದ್ದೆಗಳು
ಸೇವಕ - 187 ಹುದ್ದೆಗಳು
ಒಟ್ಟು - 1,419 ಹುದ್ದೆಗಳು

AHF ನೇಮಕಾತಿ 2022 ವಿದ್ಯಾರ್ಹತೆ :

AHF ನೇಮಕಾತಿ 2022 ವಿದ್ಯಾರ್ಹತೆ :

ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ ನೇಮಕಾತಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ,
ಪ್ರಥಮ ದರ್ಜೆ ಸಹಾಯಕರು ಹುದ್ದೆಗಳಿಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ, ಶೀಘ್ರಲಿಪಿಗಾರ ಹುದ್ದೆಗಳಿಗೆ ಹಿರಿಯ ಹಾಗೂ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣ, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ದ್ವಿತೀಯ ಪಿಯುಸಿ ಶೈಕ್ಷಣಿಕ ಅರ್ಹತೆ,
ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳಿಗೆ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ, ಚಾಲಕರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು, ಮೀನುಗಾರಿಕೆ ಫೀಲ್ಡ್ ಮ್ಯಾನ್ ಹುದ್ದೆಗಳಿಗೆ ಎಸ್‌.ಎಸ್‌.ಎಲ್‌.ಸಿ ಶೈಕ್ಷಣಿಕ ಅರ್ಹತೆ, ಕ್ಲರ್ಕ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಶೈಕ್ಷಣಿಕ ಅರ್ಹತೆ ಜೊತೆಗೆ ಮಾಂಸಹಾರಿ ಆಹಾರ ತಯಾರಿಕಾ ಜ್ಞಾನ, ಸೇವಕ ಹುದ್ದೆಗಳಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

AHF ನೇಮಕಾತಿ 2022 ವೇತನ ವಿವರ :

AHF ನೇಮಕಾತಿ 2022 ವೇತನ ವಿವರ :

ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ ಇಂತಿದೆ.

ಮೀನುಗಾರಿಕೆ ಸಹಾಯಕ ನಿರ್ದೇಶಕರು - ತಿಂಗಳಿಗೆ 40,900/- ರಿಂದ 78,200/-ರೂ
ಪ್ರಥಮ ದರ್ಜೆ ಸಹಾಯಕರು - ತಿಂಗಳಿಗೆ 27,650/- ರಿಂದ 52,650/-ರೂ
ಶೀಘ್ರಲಿಪಿಗಾರ - ತಿಂಗಳಿಗೆ 27,650/- ರಿಂದ 52,650-ರೂ
ದ್ವಿತೀಯ ದರ್ಜೆ ಸಹಾಯಕರು - ತಿಂಗಳಿಗೆ 21,400/- ರಿಂದ 42,000/-ರೂ
ಡೇಟಾ ಎಂಟ್ರಿ ಅಸಿಸ್ಟೆಂಟ್ - ತಿಂಗಳಿಗೆ 21,400/- ರಿಂದ 42,000/-ರೂ
ಚಾಲಕರು - ತಿಂಗಳಿಗೆ 21,400/- ರಿಂದ 42,000/-ರೂ
ಮೀನುಗಾರಿಕೆ ಫೀಲ್ಡ್ ಮ್ಯಾನ್ - ತಿಂಗಳಿಗೆ 18,600/- ರಿಂದ 32,600/-ರೂ
ಕ್ಲರ್ಕ್ - ತಿಂಗಳಿಗೆ 18,600/- ರಿಂದ 32,600/-ರೂ
ಸೇವಕ - ತಿಂಗಳಿಗೆ 17,000/- ರಿಂದ 28,950/-ರೂ

AHF ನೇಮಕಾತಿ 2022 ವಯೋಮಿತಿ :

AHF ನೇಮಕಾತಿ 2022 ವಯೋಮಿತಿ :

ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

AHF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

AHF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮುಂಬಡ್ತಿಯ ಮೂಲಕ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

AHF ನೇಮಕಾತಿ 2022 ಅರ್ಜಿ ಸಲ್ಲಿಕೆ :

AHF ನೇಮಕಾತಿ 2022 ಅರ್ಜಿ ಸಲ್ಲಿಕೆ :

ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Animal husbandry and fisheries department karnataka recruitment 2022 notification has been released for 1,419 assistant director, FDA, SDA and various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+