AHVS Recruitment 2021: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ 115 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ 115 ಹುದ್ದೆಗಳ ನೇಮಕಾತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಡಿ ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ 32 ಪಶುವೈದ್ಯಕೀಯ ಪರೀಕ್ಷಕರ ಹಾಗೂ 83 ಪಶುವೈದ್ಯಕೀಯ ಸಹಾಯಕ ಸೇರಿದಂತೆ ಒಟ್ಟು 115 ಹುದ್ದೆಗಳನ್ನು ತುಂಬಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:

ಆಗಸ್ಟ್ 16,2021ರ ಅನ್ವಯ ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗೆ ಅಭ್ಯರ್ಥಿಯು ಕಾನೂನಿನ ಮೂಲಕ ಸ್ಥಾಪಿಸಲಾದ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ ಪದವಿಯಲ್ಲಿ ಪ್ರಾಣಿಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಹೊಂದಿರುವ ಪದವಿಯನ್ನು ಹೊಂದಿರಬೇಕು. ಪಶುವೈದ್ಯಕೀಯ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಯು ಕಾನೂನಿನ ಮೂಲಕ ಸ್ಥಾಪಿಸಲಾದ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ವಿಶ್ವ ವಿದ್ಯಾಲಯವು ನಡೆಸಲಾದ ಪಶು ಆರೋಗ್ಯ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಅಭ್ಯರ್ಥಿಯು ನಿರ್ದೇಶಕರು, ವೃತ್ತಿ ಶಿಕ್ಷಣ ಕರ್ನಾಟಕ ಸರ್ಕಾರವು ನಡೆಸಲಾದ ಡೈರಿಗೆ ಸಂಬಂಧಿಸಿದ 2 ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಆಗಸ್ಟ್ 16,2021ರ ಅನ್ವಯ ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 35 ವರ್ಷದೊಳಗಿನ ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಪ್ರವರ್ಗ-2(ಎ),2(ಬಿ),3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪ್ರವರ್ಗ-1/ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಗರಿಷ್ಟ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪರೀಕ್ಷಕರ ಹುದ್ದೆಯು ಗ್ರೂಪ್ ಸಿ ಹುದ್ದೆಯಾಗಿದ್ದು, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂ ಮತ್ತು ಪಶುವೈದ್ಯಕೀಯ ಸಹಾಯಕರ ಹುದ್ದೆಯು ಗ್ರೂಪ್ ಸಿ ಹುದ್ದೆಯಾಗಿದ್ದು, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ನೇಮಕಾತಿ ವಿಧಾನ:

ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗೆ ಬಿ.ಎಸ್ಸಿ ಪದವಿಯಲ್ಲಿ ಪ್ರಾಣಿಶಾಸ್ತ್ರವನ್ನು ಐಚ್ಚಿಕ ವಿಷಯವಾಗಿ ಹೊಂದಿರುವ ಅಂಕಗಳ ಆಧಾರದ ಮೇಲೆ ಹಾಗೂ ರೋಸ್ಟರ್ ವಿಧಾನವನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.

ಪಶುವೈದ್ಯಕೀಯ ಸಹಾಯಕ ಹುದ್ದೆಗೆ ಕಾನೂನಿನ ಮೂಲಕ ಸ್ಥಾಪಿಸಲಾದ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರೆ ವಿಶ್ವವಿದ್ಯಾಲಯವು ನಡೆಸಲಾದ ಪಶು ಆರೋಗ್ಯ (ಪಶುಸಂಗೋಪನೆ) ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸದರಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹಾಗೂ ರೋಸ್ಟರ್ ವಿಧಾನವನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.
ನಿರ್ದೇಶಕರು, ವೃತ್ತಿ ಶಿಕ್ಷಣ (ಪದವಿ ಪೂರ್ವ ಶಿಕ್ಷಣ ಇಲಾಖೆ) ಕರ್ನಾಟಕ ಸರ್ಕಾರವು ನಡೆಸಲಾದ ಡೈರಿಗೆ ಸಂಬಂಧಿಸಿದ 2 ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸದರಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹಾಗೂ ರೋಸ್ಟರ್ ವಿಧಾನವನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ, ಪ್ರವರ್ಗ-2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 520/-ರೂ (ಅರ್ಜಿ ಶುಲ್ಕ 500/-ರೂ ಹಾಗೂ ಅಂಚೆ ಸೇವಾ ಶುಲ್ಕ 20/-ರೂ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಕೊ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 270/-ರೂ (ಅರ್ಜಿ ಶುಲ್ಕ 250/-ರೂ ಹಾಗೂ ಅಂಚೆ ಸೇವಾ ಶುಲ್ಕ 20/-ರೂ) ಅರ್ಜಿ ಶುಲ್ಕವನ್ನು ಆಗಸ್ಟ್ 20,2021ರೊಳಗೆ (ಅಂಚೆ ಕಚೇರಿ ಕರ್ತವ್ಯದ ವೇಳೆಗೆ) ಕರ್ನಾಟಕ ರಾಜ್ಯದ ಯಾವುದೇ ಇ-ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.ahvs.kar.nic.in/en-home.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 16,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಪಶುವೈದ್ಯಕೀಯ ಸಹಾಯಕ ಹುದ್ದೆಗಳ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ahvs recruitment 2021 notification has been released for the recruitment of 115 posts. Interested candidates can apply before August 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+