ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ 826 ಕಸ್ಟಮರ್ ಏಜೆಂಟ್ ಮತ್ತು ಹ್ಯಾಂಡಿಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 9, 11 ಮತ್ತು ಮೇ 14,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವ :
ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್ ಮತ್ತು ಹ್ಯಾಂಡಿಮ್ಯಾನ್ ಹುದ್ದೆಗಳಿಗೆ ಡಿಪ್ಲೋಮಾ, ಪದವಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

ವಯೋಮಿತಿ :
ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್ ಮತ್ತು ಹ್ಯಾಂಡಿಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 1,2022ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :
ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್ ಮತ್ತು ಹ್ಯಾಂಡಿಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಟ್ರೇಡ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :
ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ನೇಮಕಾತಿಯ ಕಸ್ಟಮರ್ ಏಜೆಂಟ್ ಮತ್ತು ಹ್ಯಾಂಡಿಮ್ಯಾನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,520/- ರಿಂದ 21,300/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :
ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ನೇಮಕಾತಿಯ ಕಸ್ಟಮರ್ ಏಜೆಂಟ್ ಮತ್ತು ಹ್ಯಾಂಡಿಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಸಂದರ್ಶನದ ವಿವರ :
ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್ ಮತ್ತು ಹ್ಯಾಂಡಿಮ್ಯಾನ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://aiasl.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 9, 11 ಮತ್ತು ಮೇ 14,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ :
Air India Staff Housing Colony, GST Road, Meenambakkam, Chennai - 600027, Tamilnadu.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.