ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (ಎಐಇಎಸ್‌ಎಲ್) 170 ಅಸಿಸ್ಟೆಂಟ್ ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನ.5ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಅಸಿಸ್ಟೆಂಟ್ ಸೂಪರ್‌ವೈಸರ್ |
Organisation | ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (ಎಐಇಎಸ್‌ಎಲ್) |
Educational Qualification | ಗ್ರಾಜುಯೇಷನ್ ಅಥವಾ ಬಿಸಿಎ /ಬಿ.ಎಸ್ಸ.ಐಟಿ / ಗ್ರಾಜುಯೇಟ್ ಇನ್ ಐಟಿ |
Job Location | ಭಾರತದೆಲ್ಲೆಡೆ |
Salary Scale | ತಿಂಗಳಿಗೆ 19,570/-ರೂ |
Application Start Date | September 7, 2019 |
Application End Date | November 5, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಗ್ರಾಜುಯೇಷನ್ ಜೊತೆಗೆ ಕಂಪ್ಯೂಟರ್ ಕಲಿಕೆಯಲ್ಲಿ ಡಿಪ್ಲೋಮಾ / ಸರ್ಟಿಫಿಕೇಟ್ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಸಿಎ /ಬಿ.ಎಸ್ಸ.ಐಟಿ / ಗ್ರಾಜುಯೇಟ್ ಇನ್ ಐಟಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
ವಯೋಮಿತಿ:
ಆಗಸ್ಟ್ 1,2019ರ ಅನ್ವಯ ಗರಿಷ್ಟ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,570/-ರೂ ವೇತವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ,ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ :
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (ಎಐಇಎಸ್‌ಎಲ್)ನ ಅಧಿಕೃತ ವೆಬ್‌ಸೈಟ್ http://aiesl.airindia.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.