AIATSL Recruitment 2020: 13 ಮ್ಯಾನೇಜರ್‌, ಆಫೀಸರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ 13 ಡೆಪ್ಯುಟಿ ಮ್ಯಾನೇಜರ್, ಡ್ಯುಟಿ ಮ್ಯಾನೇಜರ್, ಆಫೀಸರ್, ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 28ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಏರ್ ಇಂಡಿಯಾ ಎಟಿಎಸ್ಎಲ್‌ ನಲ್ಲಿ ಉದ್ಯೋಗಾವಕಾಶ...ಡಿ.28ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ, ಎಂಬಿಎ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ವಿವಿಧ ಹುದ್ದೆಗಳಿನುಸಾರ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ ಡ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ, ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,000/-ರೂ ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,300/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.airindia.in/index.htm ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Air India ATSL recruitment 2020 notification has been released for 13 deputy manager, officer and executive posts. Interested candidates can apply before December 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X