ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜುಲೈ 13,2020ರ ವರೆಗೆ ವಿಸ್ತರಿಸಲಾಗಿದೆ.
ಈ ಮುಂಚೆ ಇಲಾಖೆಯು ಜೂನ್ 22,2020ರೊಳಗೆ ಅರ್ಜಿಯನ್ನು ಆಹ್ವಾನಿಸಿತ್ತು. ಆದರೆ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 13,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಅರ್ಜಿ ಶುಲ್ಕವನ್ನು ಜುಲೈ 15,2020ರೊಳಗೆ ಪಾವತಿಸಬೇಕಿರುತ್ತದೆ.
ಸೂಚನೆ:
ಜೂನ್ 22,2020ರ ಅನ್ವಯ ಹುದ್ದೆಗಳಿಗೆ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯ ಪ್ರಕಟಣೆಯನ್ನು ಓದಲು ಮುಂದೆ ನೋಡಿ.
For Daily Alerts