ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅವಶ್ಯವಿರುವ ಸನ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪುರುಷ ಮತ್ತು ಮಹಿಳಾ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 16 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಹುದ್ದೆಗಳ ವಿವರ
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಫ್ ಪಿ ಬಿ)
ಒಟ್ಟು ಹುದ್ದೆಗಳು: 05
ವಿದ್ಯಾರ್ಹತೆ
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ವಿಜ್ಞಾನ (ಬಯಾಲಜಿ,ಫಿಸಿಕ್ಸ್, ಕೆಮಿಸ್ಟ್ರಿ, ಝೂಲಾಜಿ, ಬಾಟನಿ, ಫೊರೆನ್ಸಿಕ್ ಸೈನ್ಸ್, ಕ್ರಿಮಿನಾಲಜಿ, ಡೆವೆಲಪ್ಮೆಂಟಲ್ ಬಯಾಲಜಿ, ಬಯೋಕೆಮಿಸ್ಟ್ರಿ, ಸೆಲ್ ಬಯಾಲಜಿ, ಬಯೋಸೈನ್ಸ್, ಮೈಕ್ರೋ ಬಯಾಲಜಿ, ಬಯೋಫಿಸಿಕ್ಸ್, ಕಂಪ್ಯೂಟರ್ ಸೈನ್ಸ್) ವಿಷಯದಲ್ಲಿ ಪದವಿಗಳಿಸಿರಬೇಕು.
ವಯೋಮಿತಿ
ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳು
ಒಬಿಸಿ/ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಕನಿಷ್ಠ 21 ಮತ್ತು ಗರಿಷ್ಠ 30 ವರ್ಷಗಳನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ ಮತ್ತ ಒಬಿಸಿ ಅಭ್ಯರ್ಥಿಗಳಿಗೆ ರೂ.250/-
ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ರೂ.100/-
ಆರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು.
ಆಭ್ಯರ್ಥಿಯೂ ಅರ್ಜಿಯನ್ನು ಭರ್ತಿ ಮಾಡಿ ಚಲನ್‍ಅನ್ನು ಸೃಜಿಸಿ ಸಂಭಂದಪಟ್ಟ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.
ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಅರ್ಜಿಯನ್ನು ಒಂದೇ ಹುದ್ದೆಗೆ ಸಲ್ಲಿಸಿದ್ದಲ್ಲಿ , ಒಂದೇ ಅರ್ಜಿಯನ್ನು(ಅಂತಿಮವಾಗಿ ಸಲ್ಲಿಸಿದ) ಮಾತ್ರ ಪರಿಗಣಿಸಲಾಗುವುದು.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಹಿಷ್ಣುತೆ ಮತ್ತು ದೇಹಧಾಢ್ರ್ಯತೆ ಪರೀಕ್ಷೆಯಲ್ಲಿ ಆರ್ಹಗೊಂಡ ಅಭ್ಯರ್ಥಿಗಳಿಗೆ ಎಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿಯೇ ಲಿಖಿತ ಪರೀಕ್ಷೆ ನಡೆಸಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2017
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-08-2017
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ವಿಳಾಸ ಗಮನಿಸಿ


Click it and Unblock the Notifications











