ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಪಿಎಸ್ ಐ(ವೈರ್ ಲೆಸ್) ಹುದ್ದೆಗೆ ವಿಜ್ಞಾನ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 25, 2017ರೊಳಗೆ ಅರ್ಜಿ ಹಾಕಬಹುದು.

ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಪಿಎಸ್ ಐ(ವೈರ್ ಲೆಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿಜ್ಞಾನ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 25, 2017ರೊಳಗೆ ಅರ್ಜಿ ಹಾಕಬಹುದು.

ಹುದ್ದೆಗಳ ವಿವರ

  • ಪೊಲೀಸ್ ಸಬ್‍ಇನ್ಸ್ಪೆಕ್ಟರ್ (ವೈರ್ ಲೆಸ್) ಪುರುಷ -07
  • ಮಹಿಳಾ ಪೊಲೀಸ್ ಸಬ್‍ಇನ್ಸ್ಪೆಕ್ಟರ್ (ವೈರ್ ಲೆಸ್) -01
  • ಪೊಲೀಸ್ ಸಬ್‍ಇನ್ಸ್ಪೆಕ್ಟರ್ (ವೈರ್ ಲೆಸ್) ಸೇವೆಯಲ್ಲಿರುವವರಿಗೆ - 01

ಒಟ್ಟು = 09

ವೇತನ ಶ್ರೇಣಿ: ರೂ.20000-36300/-

ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ

ವಯೋಮಿತಿ

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 25.07.2017ಕ್ಕೆ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
  • ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.

ಸೇವಾನಿರತ ಅಭ್ಯರ್ಥಿಗಳಿಗೆ

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.
  • ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು.

ವಿದ್ಯಾರ್ಹತೆ

ಅಭ್ಯರ್ಥಿಗಳು ಪದವಿ ಪಡೆದಿರಬೇಕು. ವಿಜ್ಞಾನ ವಿಷಯದಲ್ಲಿ ಜೀವಶಾಸ್ತ್ರ, ಭೌತಶಾಸ್ತ್ರ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ವಿಧಿವಿಜ್ಞಾನ ಶಾಸ್ತ್ರ, ಕ್ರಿಮಿನಾಲಜಿ, ಬಯೋ ಕೆಮಿಸ್ಟ್ರಿ, ಸೆಲ್ ಬಯೋಲಜಿ, ಮೈಕ್ರೋ ಬಯೋಲಜಿ, ಕಂಪ್ಯೂಟರ್ ಸೈನ್ಸ್ ಗಳನ್ನು ಅಭ್ಯಸಿರಬೇಕು.

ಆಯ್ಕೆ ಪ್ರಕ್ರಿಯೆ

ಪ್ರವೇಶ ಪರೀಕ್ಷೆ, ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ಎದುರಿಸಬೇಕು.

ಅರ್ಜಿ ಸಲ್ಲಿಕೆ

  • ಅರ್ಜಿಗಳನ್ನು ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನಲ್ಲಿ ಸಲ್ಲಿಸುವುದು

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.250/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100/-
  • ಆರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು.

ಸೂಚನೆ

  • ಆಭ್ಯರ್ಥಿಯೂ ಅರ್ಜಿಯನ್ನು ಭರ್ತಿ ಮಾಡಿ ಚಲನ್‍ಅನ್ನು ಸೃಜಿಸಿ ಸಂಭಂದಪಟ್ಟ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.
  • ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಅರ್ಜಿಯನ್ನು ಒಂದೇ ಹುದ್ದೆಗೆ ಸಲ್ಲಿಸಿದ್ದಲ್ಲಿ , ಒಂದೇ ಅರ್ಜಿಯನ್ನು(ಅಂತಿಮವಾಗಿ ಸಲ್ಲಿಸಿದ) ಮಾತ್ರ ಪರಿಗಣಿಸಲಾಗುವುದು.
  • ಸಹಿಷ್ಣುತೆ ಮತ್ತು ದೇಹಧಾಢ್ರ್ಯತೆ ಪರೀಕ್ಷೆಯಲ್ಲಿ ಆರ್ಹಗೊಂಡ ಅಭ್ಯರ್ಥಿಗಳಿಗೆ ಎಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿಯೇ ಲಿಖಿತ ಪರೀಕ್ಷೆ ನಡೆಸಲಾಗುವುದು.

ಪ್ರಮುಖ ದಿನಾಂಕಗಳು

1. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06/07/2017, ಬೆಳಿಗ್ಗೆ 10:00 ಗಂಟೆಯಿಂದ.
2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/07/2017, ಸಂಜೆ 06:00 ಗಂಟೆವರೆಗೆ.
3. ಶುಲ್ಕವನ್ನು ಅಧಿಕೃತ ಬ್ಯಾಂಕ್ ಶಾಖೆಗಳ ಕಛೇರಿ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 26/07/2017.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka State Police has announced a notification for the recruitment of PSI (Wireless) vacancies. Eligible candidates may apply online from 06-07-2017 to 25-07-2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+