Army Public School Recruitment 2020: 8000 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರ್ಮಿ ಪಬ್ಲಿಕ್ ಶಾಲೆಯಲ್ಲಿ 8,000 ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 20,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಆರ್ಮಿ ಪಬ್ಲಿಕ್ ಶಾಲೆಯಲ್ಲಿ 8000 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಬಿ.ಎಸ್ಸಿ, ಬಿಸಿಎ, ಎಂಸಿಎ, ಎಂಎಸ್ಸಿ, ಪದವಿ, ಗ್ರಾಜುಯೇಷನ್, ಬಿಎ ಬಿ.ಎಡ್, ಬಿಎಸ್ಸಿ ಬಿ.ಎಡ್, ಡಿ.ಎಡ್, ಬಿ.ಎಡ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಏಪ್ರಿಲ್ 1,2021ರ ಅನ್ವಯ ಹೊಸ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು ವೃತ್ತಿಯಲ್ಲಿ ಅನುಭವ ಹೊಂದಿದ ಗರಿಷ್ಟ 57 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://aps-csb.in/College/Index_New.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 20,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Army public school recruitment 2020 notification has been released for recruitment of 8000 teacher posts. Interested candidates can apply through online before October 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X