ಆಕ್ಸಿಸ್ ಬ್ಯಾಂಕ್ 91 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಈ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಮೊದಲು ಅಧಿಸೂಚನೆಯನ್ನು ಓದಿಕೊಳ್ಳತಕ್ಕದ್ದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 29,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ವ್ಯವಸ್ಥಾಪಕ ಮತ್ತು ಅಧಿಕಾರಿ |
| Organisation | ಆಕ್ಸಿಸ್ ಬ್ಯಾಂಕ್ |
| Educational Qualification | ಪದವಿ ಮತ್ತು ಸ್ನಾತಕೋತ್ತರ ಪದವಿ |
| Job Location | ಭಾರತದೆಲ್ಲೆಡೆ |
| Salary Scale | ನೇಮಕಾತಿ ನಿಯಮಾನುಸಾರ |
| Application Start Date | February 13, 2020 |
| Application End Date | February 29, 2020 |
ಶೈಕ್ಷಣಿಕ ವಿದ್ಯಾರ್ಹತೆ:
ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಆಕ್ಸಿಸ್ ಬ್ಯಾಂಕ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.axisbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 29,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











