ಬಾಗಲಕೋಟೆ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಬಾಗಲಕೋಟೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 6.2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬಾಗಲಕೋಟೆ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ
ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಬಾಗಲಕೋಟೆ ಜಿಲ್ಲಾ ಅಂಗನವಾಡಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು
Organisation ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
Educational Qualification SSLC, 9ನೇ ತರಗತಿ
Job Location ಬಾಗಲಕೋಟೆ ಜಿಲ್ಲೆ (ಕರ್ನಾಟಕ)
Application Start Date March 7, 2019
Application End Date April 6, 2019

ವಿದ್ಯಾರ್ಹತೆ:

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

ವಯೋಮಿತಿ:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಮಾಡುವ ಬಗ್ಗೆ:

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ವಿಧವೆಯರ ಆಯ್ಕೆ:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ವಿಧವೆಯರು ಅರ್ಜಿ ಸಲ್ಲಿಸಿದಾಗ ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ನೇರವಾಗಿ ವಿಧವೆಯರನ್ನೇ ಆಯ್ಕೆ ಮಾಡಲಾಗುತ್ತದೆ. ಆದರೆ ಎಸ್ ಎಸ್ ಎಲ್ ಸಿ ಉತ್ತೀರ್ಣ, ಸ್ಥಳೀಯರು ಮತ್ತು ವಯೋಮಿತಿಯೊಳಗಿರಬೇಕಾಗಿರುವುದು ಕಡ್ಡಾಯ. ಅರ್ಜಿ ಸಲ್ಲಿಸಿದ ನಂತರ ವಿಧವೆಯಾದಲ್ಲಿ ಪರಿಗಣಿಸುವುದಿಲ್ಲ.

ಅಂಗವಿಕಲರ ಆಯ್ಕೆ:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅಂಗವಿಕಲರು ಅರ್ಜಿ ಸಲ್ಲಿಸಿದಾಗ ಇತರೆ ಎಲ್ಲಾ
ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ನೇರವಾಗಿ ಅಂಗವಿಕಲರನ್ನೇ ಆಯ್ಕೆ ಮಾಡಲಾಗುತ್ತದೆ ಆದರೆ ಅಂಗವಿಕಲ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಉತ್ತೀರ್ಣ, ಸ್ಥಳೀಯರು ಮತ್ತು ವಯೋಮಿತಿಯೊಳಗೆ ಇರಬೇಕಾಗಿರುವುದು ಕಡ್ಡಾಯ.
(ಕಿವುಡರು, ಮೂಕರು, ಕುರುಡರು,ಬುದ್ದಿ ಮಾಂದ್ಯರು, ಮಾನಸಿಕ ಅಸ್ವಸ್ಥರು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಹರಲ್ಲ)

ಬಾಗಲಕೋಟೆ ಜಿಲ್ಲೆಯ ಖಾಲಿ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಮಾನದಂಡವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bagalkot District Women Child Development recruitment notification has been released on website for the recruitment of Anganwadi Workers and Anganwadi Helpers posts. Interested candidates can apply through online before 6th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+