ಬಾಗಲಕೋಟೆ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ 10 ಆಡಳಿತ ಸಹಾಯಕ ಮತ್ತು ತಾಲೂಕು ಐಇಸಿ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:
ಆಡಳಿತ ಸಹಾಯಕ -9 ಹುದ್ದೆಗಳು
ತಾಲೂಕು ಐಇಸಿ ಸಂಯೋಜಕ- 1 ಹುದ್ದೆ
ಒಟ್ಟು 10 ಹುದ್ದೆಗಳು
ವಿದ್ಯಾರ್ಹತೆ:
ಬಿ.ಕಾಂ ಪದವಿ ಮತ್ತು ಸಮೂಹ ಸಂವಹನ ಮಾಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ ಮತ್ತು ವೇತನ:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಡಳಿತ ಸಹಾಯಕ ಮತ್ತು ತಾಲೂಕು ಐಇಸಿ ಸಂಯೋಜಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಪಂಚಾಯತ್ ಕಾರ್ಯಾಲಯ, ಬಾಗಲಕೋಟೆಯಿಂದ ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಶ್ರೀ ಅಜಯ ಸೂಳಿಕೇರಿ (ಐ.ಇ.ಸಿ ) ಇವರಿಗೆ ಸೆಪ್ಟೆಂಬರ್ 15,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











