ಬಾಗಲಕೋಟೆ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ 17ತಾಂತ್ರಿಕ ಸಹಾಯಕರು (ಅರಣ್ಯ/ಕೃಷಿ/ತೋಟಗಾರಿಕೆ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಬಿ.ಎಸ್ಸಿ, ಎಂ.ಎಸ್ಸಿ ವಿದ್ಯಾರ್ಹತೆ ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25,2021
ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ದಿನಾಂಕ: ಮಾರ್ಚ್ 30,2021
ಮೆರಿಟ್ ಪಟ್ಟಿ ಆಕ್ಷೇಪಣೆ ಸಲ್ಲಿಸುವ ದಿನಾಂಕ: ಏಪ್ರಿಲ್ 6,2021
ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ: ಏಪ್ರಿಲ್ 7,2021
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಜಿಲ್ಲಾ ಪಂಚಾಯಿತಿ ಬಾಗಲಕೋಟೆ ಕೊಠಡಿ ಸಂಖ್ಯೆ: 6 ರಲ್ಲಿ ಅರ್ಜಿ ಬಂದು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 25,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ತದನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್‌ಸೈಟ್ https://bagalkot.nic.in/en/ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











