ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ 2019: 44ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ 44 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ 2019

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಜೂನ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ದ್ವಿತೀಯ ದರ್ಜೆ ಸಹಾಯಕ
Organisation ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ.
Educational Qualification ಬಿ.ಎ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮ
Job Location ಬಾಗಲಕೋಟೆ (ಕರ್ನಾಟಕ)
Salary Scale ತಿಂಗಳಿಗೆ 17,650/- ರಿಂದ 32,000/-ರೂ
Application Start Date June 12, 2019
Application End Date June 24, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಎ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,650/- ರಿಂದ 32,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1/ ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಡಿಸಿಸಿ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://bgkdccbank.com/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಸದಸ್ಯ ಕಾರ್ಯದರ್ಶಿ,
ಸಿಬ್ಬಂದಿ ನೇಮಕಾತಿ ಸಮೀತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,
ಸೆಕ್ಟರ್ ನಂ:24, ನವನಗರ ಬಾಗಲಕೋಟೆ-587103

More News  

For Quick Alerts
ALLOW NOTIFICATIONS  
For Daily Alerts

English summary
Bagalokot DCC Bank 2019 notification has been released on official website for the recruitment of 44 SDA posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+