ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ 297 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್‌ಲೈನ್ ಮೂಲಕ ಫೆಬ್ರವರಿ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ:
ಬಿ.ವಿ.ಎಸ್ಸಿ, ಎಹೆಚ್, ಎಂಬಿಎ, ಎಂ.ಕಾಂ, ಪದವಿ, ಬಿ.ಟೆಕ್, ಬಿ.ಎಸ್ಸಿ, ಬಿಬಿಎ, ಬಿಬಿಎಂ, ಎಂಬಿಎ, ಎಂ.ಎಸ್ಸಿ, ಎಂಸಿಎ, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ, ಬಿ.ಎ, ಬಿ.ಕಾಂ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಫೆಬ್ರವರಿ 3,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 28,100/- ರಿಂದ 50,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಜಿದಾರರು 1,000/-ರೂ ಮತ್ತು ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಅಧಿಕೃತ ವೆಬ್‌ಸೈಟ್ https://www.bamulnandini.coop/index.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











