ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ 2019: ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ 39 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 31,2019 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

 ಶೀಘ್ರಲಿಪಿಗಾರ  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಸಿವಿಲ್ ನ್ಯಾಯಾಲಯ
Educational Qualification SSLC/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ
Job Location ಬೆಂಗಳೂರು
Salary Scale ಶೀಘ್ರಲಿಪಿಗಾರ -ತಿಂಗಳಿಗೆ 27,650/- ರಿಂದ 52,650/-ರೂ
Application Start Date March 1, 2019
Application End Date March 31, 2019

ವಿದ್ಯಾರ್ಹತೆ:

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಇಂಗ್ಲೀಷ್ ಪ್ರೌಢದರ್ಜೆಯ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.ಕನ್ನಡ ಮತ್ತು ಇಂಗ್ಲಿಷ್ ಪ್ರೌಢದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂತೆ ಕನಿಷ್ಠ ವಯೋಮಿತಿ 18 ವ‍ರ್ಷ ತುಂಬಿರಬೇಕು. ಸಾಮಾನ್ಯ ವರ್ಗದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು , ಪ್ರವರ್ಗ 2A, 2B, 3A & 3Bಯ 38ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು ಮತ್ತು ಪ.ಜಾ/ಪ.ಪಂ/ಪ್ರವರ್ಗ 1 ರ 40ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವರೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಶೀಘ್ರಲಿಪಿಗಾರ-ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 27,650/- ರಿಂದ 52,650/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯು ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವು ಈ ಕೆಳಕಂಡಂತೆ ನಡೆಸಲಾಗುವುದು.
ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು ಒಂದು ನಿಮಿಷಕ್ಕೆ 120 ಪದಗಳ ವೇಗದಲ್ಲಿ 05 ನಿಮಿಷಗಳ ಅವಧಿ ಉಕ್ತಲೇಖನವನ್ನು ನೀಡುವರು ಮತ್ತು ಅಭ್ಯರ್ಥಿಯು ಆ ಉಕ್ತಲೇಖನದ ಟಿಪ್ಪಣಿಯನ್ನು 45 ನಿಮಿಷಗಳ ಅವಧಿಯೊಳಗೆ ಲಿಪ್ಯಂತರ ಮಾಡಿ ಬೆರಳಚ್ಚು ಮಾಡಬೇಕು.

ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಹೊಂದಿದ್ದು, ಉತ್ತೀರ್ಣರಾಗಲು ಕನಿಷ್ಠ 50ಅಂಕಗಳನ್ನು ನಿಗದಿಪಡಿಸಿರುತ್ತದೆ.
ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಯ ಒಟ್ಟು ಅಂಕಗಳ ಶೇಕಡಾವಾರುವಿನ ಮೊತ್ತದ ಆಧಾರದ ಮೇಲೆ 1 ಖಾಲಿ ಹುದ್ದೆಗೆ 05 ಅಭ್ಯರ್ಥಿಗಳ ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಪಡಿಸಲಾದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವು 05 ಅಂಕಗಳನ್ನು ಒಳಗೊಂಡಿರುತ್ತದೆ.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ನಿಗದಿತ ಅರ್ಜಿ ಶುಲ್ಕ- ಪಾವತಿಸಬೇಕಾದ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ಅರ್ಹತೆ, ಪ್ರವರ್ಗ 2A, 2B, 3A ಮತ್ತು 3Bಅಭ್ಯರ್ಥಿಗಳಿಗೆ
200/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 50/-ರೂ ಶುಲ್ಕವನ್ನು ನಿಗದಿ ಮಾಡಲಾಗಿದೆ.

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಆನ್ ಲೈನ್ ಪೇಮೆಂಟ್ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಚಲನ್ ಡೌನ್ ಲೋಡ್ ಸೌಲಭ್ಯದ ಮೂಲಕ ಪಾವತಿ ಮಾಡತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಚಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್ , ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಆಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಹಾಗೆಯೇ ಶೀಘ್ರಲಿಪಿಗಾರ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bengaluru city civil Court has been invited applications for the Post of Stenos.Interested candidates can apply through online before 31st march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+