ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಟಮಕ, ಕೋಲಾರ ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ವಿಭಾಗಗಳಿಗೆ 2020-21ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ಕಲಾ, ವಿಜ್ಞಾನ, ವಾಣಿಜ್ಯ ಮತ್ತು ಶಿಕ್ಷಣ ವಿಭಾಗಗಳ ವಿಷಯಗಳಿಗೆ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಪಿಹೆಚ್ಡಿ/ಎನ್‌ಇಟಿ/ಸ್ಲೆಟ್ ಅರ್ಹತೆಯನ್ನು ಹೊಂದಿರುವ ಅರ್ಜಿ ಸಲ್ಲಿಸಬಹುದು.
ವೇತನದ ವಿವರ:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಸಂದರ್ಶನ ದಿನಾಂಕ ಮತ್ತು ಇತರೆ ಮಾಹಿತಿಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ https://bnu.ac.in/ ರಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಕುಲಸಚಿವರು, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಆಡಳಿತ ಕಛೇರಿ), ಶ್ರೀ ದೇವರಾಜ ಅರಸು ಬಡಾವಣೆ, ಟಮಕ, ಕೋಲಾರ -563 103 ಇಲ್ಲಿಗೆ ಸೆಪ್ಟೆಂಬರ್ 8,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08152-243152/53
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.