ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕಗಳಲ್ಲಿ ಖಾಲಿ ಇರುವ 149 ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. 35 ಶೀಘ್ರಲಿಪಿಗಾರ, 36 ಬೆರಳಚ್ಚುಗಾರ, 1 ಬೆರಳಚ್ಚು-ನಕಲುಗಾರ, 5ಆದೇಶ ಜಾರಿಕಾರ ಮತ್ತು 72 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ,ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ಅಧಿಸೂಚನೆಯನ್ನು ಓದಿದ ನಂತರ ಅರ್ಜಿ ಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಮಾರ್ಚ್14,2019 ರೊಳಗೆ ಸಲ್ಲಿಸಬೇಕು.

| CRITERIA | DETAILS |
| Name Of The Posts | ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚುನಕಲುಗಾರ, ಆದೇಶ ಜಾರಿಕಾರ, ಜವಾನ |
| Organisation | ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ |
| Educational Qualification | SSLC/ ತತ್ಸಮಾನ ವಿದ್ಯಾರ್ಹತೆ, 7ನೇ ತರಗತಿ |
| Job Location | ಬೆಂಗಳೂರು |
| Salary Scale | ಶೀಘ್ರಲಿಪಿಗಾರ-ತಿಂಗಳಿಗೆ 27,650/- ರಿಂದ52,650/- ರೂ,ಬೆರಳಚ್ಚುಗಾರ & ಬೆರಳಚ್ಚು-ನಕಲುಗಾರ-ತಿಂಗಳಿಗೆ 21,400/- ರಿಂದ 42,000/-,ಆದೇಶ ಜಾರಿಕಾರ-ತಿಂಗಳಿಗೆ 19,950/- ರಿಂದ 37,900/- ರೂ,ಜವಾನ-ತಿಂಗಳಿಗೆ 17,000/- ರಿಂದ 28,950/-ರೂ |
| Application Start Date | February 14, 2019 |
| Application End Date | March 14, 2019 |
ವಿದ್ಯಾರ್ಹತೆ:
ಶೀಘ್ರಲಿಪಿಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಕಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಹಿರಿಯ ಶ್ರೇಣಿ ಅಥವಾ ತತ್ಸಮಾನ ಪರೀಕ್ಷೆಯನ್ನು ಅಧಿಸೂಚನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಕಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯನ್ನು ಅಧಿಸೂಚನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಬೆರಳಚ್ಚು- ನಕಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಕಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯನ್ನು ಅಧಿಸೂಚನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ಅಧಿಸೂಚನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯನ್ನು ಅಧಿಸೂಚನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಹುದ್ದೆಗಳ ವರ್ಗೀಕರಣ:
ಶೀಘ್ರಲಿಪಿಗಾರ: 35 ಹುದ್ದೆಗಳು
| ವರ್ಗೀಕರಣ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕ | ಕನ್ನಡ ಮಾಧ್ಯಮ | ಯೋಜನಾ ನಿರಾಶ್ರಿತ | ಅಂಗ ವಿಕಲ | ಒಟ್ಟು |
| ಪ.ಜಾತಿ | 2 | 2 | 1 | 1 | 6 | |||
| ಪ.ಪಂಗಡ | 1 | 01 | ||||||
| ಪ್ರವರ್ಗ1 | 1* | 01 | ||||||
| ಪ್ರವರ್ಗ2A | 1 | 2 | 1 | 1 | 5 | |||
| ಪ್ರವರ್ಗ 2B | 1 | 1* | 2 | |||||
| ಪ್ರವರ್ಗ 3A | 1 | 01 | ||||||
| ಪ್ರವರ್ಗ 3B | -1 | 1 | 02 | |||||
| ಸಾಮಾನ್ಯ | 4 | 5 | 4 | 2 | 1 | 1* | 17 | |
| ಒಟ್ಟು | 6 | 9 | 10 | 2 | 3 | 2 | 3 | 35 |
* ಅಂಗವಿಕಲರಿಗೆಂದು ವರ್ಗೀಕರಿಸಲಾದ ಹುದ್ದೆಗಳನ್ನು ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.
ಬೆರಳಚ್ಚುಗಾರ: 36 ಹುದ್ದೆಗಳು
| ವರ್ಗೀಕರಣ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕ | ಕನ್ನಡ ಮಾಧ್ಯಮ | ಯೋಜನಾ ನಿರಾಶ್ರಿತ | ಅಂಗ ವಿಕಲ | ಒಟ್ಟು |
| ಪ.ಜಾತಿ | 1 | 2 | -1 | 1 | 1* | 6 | ||
| ಪ.ಪಂಗಡ | 1 | 01 | ||||||
| ಪ್ರವರ್ಗ1 | -1 | 01 | ||||||
| ಪ್ರವರ್ಗ2A | 1 | -1 | 1 | -1 | 1 | 1* | 6 | |
| ಪ್ರವರ್ಗ 2B | -1 | -1 | 2 | |||||
| ಪ್ರವರ್ಗ 3A | -1 | 01 | ||||||
| ಪ್ರವರ್ಗ 3B | -1 | 01 | ||||||
| ಸಾಮಾನ್ಯ | 3 | 5 | 5 | 2 | 1 | 1- | 1** | 18 |
| ಒಟ್ಟು | 6 | 11 | 8 | 4 | 1 | 3- | 3 | 36 |
ಸೂಚನೆ: * ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ
** ಶ್ರವಣದೋಷ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ
ಬೆರಳಚ್ಚು-ನಕಲುಗಾರರ: 1ಹುದ್ದೆ
| ವರ್ಗೀಕರಣ | ಮಹಿಳೆ | ಒಟ್ಟು |
| ಸಾಮಾನ್ಯ | 1 | 1 |
| ಒಟ್ಟು | 1 | 1 |
ಆದೇಶ ಜಾರಿಕಾ: 5 ಹುದ್ದೆಗಳು
| ವರ್ಗೀಕರಣ | ಮಹಿಳೆ | ಗ್ರಾಮೀಣ | ಕನ್ನಡ ಮಾಧ್ಯಮ | ಒಟ್ಟು |
| ಪ.ಜಾತಿ | 1 | 1 | ||
| ಪ.ಪಂಗಡ | ||||
| ಪ್ರವರ್ಗ1 | ||||
| ಪ್ರವರ್ಗ2A | ||||
| ಪ್ರವರ್ಗ 2B | ||||
| ಪ್ರವರ್ಗ 3A | ||||
| ಪ್ರವರ್ಗ 3B | 1 | 1 | ||
| ಸಾಮಾನ್ಯ | 1 | 1 | 1 | 3 |
| ಒಟ್ಟು | 3 | 1 | 1 | 5 |
ಜವಾನ: 72 ಹುದ್ದೆಗಳು
| ವರ್ಗೀಕರಣ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕ | ಕನ್ನಡ ಮಾಧ್ಯಮ | ಯೋಜನಾ ನಿರಾಶ್ರಿತ | ಅಂಗ ವಿಕಲ | ಒಟ್ಟು |
| ಪ.ಜಾತಿ | 1 | 4 | 4 | -1 | 1 | 11 | ||
| ಪ.ಪಂಗಡ | -1 | 1 | 02 | |||||
| ಪ್ರವರ್ಗ1 | -1 | -1 | -1 | 03 | ||||
| ಪ್ರವರ್ಗ2A | 1 | 4 | -3 | -1 | 1 | 10 | ||
| ಪ್ರವರ್ಗ 2B | -1 | -1 | -1 | 3 | ||||
| ಪ್ರವರ್ಗ 3A | 1 | 1 | -1 | 03 | ||||
| ಪ್ರವರ್ಗ 3B | -1 | 1 | -1 | -1 | 04 | |||
| ಸಾಮಾನ್ಯ | 5 | 12 | 10 | 3 | 2 | 2- | 2* | 36 |
| ಒಟ್ಟು | 9 | 25 | 22 | 8 | 4 | 2- | 2 | 72 |
ಸೂಚನೆ: ಅಂಗವಿಕಲರಿಗೆಂದು ವರ್ಗೀಕರಿಸಲಾದ ಹುದ್ದೆಗಳನ್ನು ಶ್ರವಣದೋಷ ಮತ್ತು ಚಲನವಲನ ವೈಕಲ್ಯ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.
ವಯೋಮಿತಿ:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿದ ದಿನಾಂಕದಂದು ಕನಿಷ್ಟ 18ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ
| ಸಾಮಾನ್ಯ ವರ್ಗ | 35ವರ್ಷ |
| 2A,2B,3A,3B | 38ವರ್ಷ |
| ಪ.ಜಾತಿ, ಪ.ಪಂಗಡ, ಪ್ರವರ್ಗ-1 | 40ವರ್ಷ |
ಅಭ್ಯರ್ಥಿಗಳು ಈ ಅಧಿಸೂಚನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು ಮತ್ತು ಸರಕಾರಿ ಸೇವೆಯಲ್ಲಿರುವವರೆಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಲ್ಲಿ ಮಹಿಳಾ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು ಹಾಗೂ ಗ್ರಾಮೀಣ ಅಭ್ಯರ್ಥಿಳ ಮೀಸಲಾತಿಗೆ ಅರ್ಹ ಅಭ್ಯರ್ಥಿಗಳು ಲಭ್ಯವಿರದೇ ಇದ್ದ ಪಕ್ಷದಲ್ಲಿ, ಆ ಹುದ್ದೆಗಳನ್ನು ಆಯಾ ಪಂಗಡಗಳ ಇತರೆ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು. ಆಯಾ ಪಂಗಡಗಳ ಇತರೆ ಅಭ್ಯರ್ಥಿಗಳಿಗೂ ಸಹ ಲಭ್ಯವಾಗದಿದ್ದಲ್ಲಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಹುದ್ದೆಗಳನ್ನು ಹೊರತುಪಡಿಸಿ ಇನ್ನುಳಿದ ಹಿಂದುಳಿದ ವರ್ಗಗಳ ಹುದ್ದೆಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು.
ವೇತನದ ವಿವರ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ
27,650/- ರಿಂದ 52,650/- ರೂ ಹಾಗೂ ಇತರೆ ಭತ್ಯೆಗಳು, ಬೆರಳಚ್ಚುಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ
ತಿಂಗಳಿಗೆ 21,400/- ರಿಂದ 42,000/-ರೂ ಹಾಗೂ ಇತರೆ ಭತ್ಯೆಗಳು,ಆದೇಶ ಜಾರಿಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,950.- ರಿಂದ 37,900/-ರೂ ಹಾಗೂ ಇತರೆ ಭತ್ಯೆಗಳು ಮತ್ತು ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೈ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಶೀಘ್ರಲಿಪಿಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಪದಗಳ ದರದಲ್ಲಿ 5ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಬೆರಳಚ್ಚುಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನಿಗಧಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಯ ಒಟ್ಟು ಅಂಕಗಳ ಶೇಕಡಾವಾರುವಿನ ಮೊತ್ತದ ಆಧಾರದ ಮೇಲೆ 1:25 ರಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಜವಾನ ಹುದ್ದೆಗಳಿಗೆ ನಿಗಧಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಢಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
ಅರ್ಜಿ ಶುಲ್ಕದ ವಿವರ:
ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:
| ಸಾಮಾನ್ಯ ಅರ್ಹತೆ, ಪ್ರವರ್ಗ- 1,ಪ್ರವರ್ಗ- 2A, 2B,3A,3B ಅಭ್ಯರ್ಥಿಗಳಿಗೆ | 200/-ರೂ |
| ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ | 100/-ರೂ |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/bangalorerural ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಆನ್ ಲೈನ್ ಪೇಮೆಂಟ್ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಚಲನ್ ಡೌನ್ ಲೋಡ್ ಸೌಲಭ್ಯದ ಮೂಲಕ ಪಾವತಿ ಮಾಡತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಚಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್ , ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಆಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಲು ಇಚ್ಚಿಸಿದಲ್ಲಿ ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











