ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಸಮಾಲೋಚಕ |
| Organisation | ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ |
| Educational Qualification | ಎಂಸಿಎ /ಎಂಎ, ಬಿಎಸ್ಸಿ / ಬಿ.ಇ ಮತ್ತು ಪದವಿ / ಡಿಪ್ಲೋಮ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 22,000/-ರೂ |
| Application Start Date | May 2, 2019 |
| Application End Date | May 30, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಮೇಲ್ವಿಚಾರಣೆ, ಮೌಲ್ಯಮಾಪನ ಹಾಗೂ ಎಂಐಎಸ್ ಸಮಾಲೋಚಕರು ಹುದ್ದೆಗಳಿಗೆ ಎಂಸಿಎ ಅಥವಾ ಎಂಎ ಮತ್ತು ಬಿಎಸ್ಸಿ ಅಥವಾ ಬಿಇ ವಿದ್ಯಾರ್ಹತೆ , ಶುಚಿತ್ವ ಹಾಗೂ ನೈರ್ಮಲ್ಯ ಸಮಾಲೋಚಕರು ಹುದ್ದೆಗಳಿಗೆ ಪದವಿ ಅಥವಾ ಡಿಪ್ಲೋಮ ಮತ್ತು ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು ಹುದ್ದೆಗಳಿಗೆ ಬಿಇ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://bangalorerural.nic.in/en/zilla-panchyat/ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 30,2019 ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಕಳುಹಿಸಬಹುದು.
ಕಚೇರಿಯ ವಿಳಾಸ:
ಜಿಲ್ಲಾಡಳಿತ ಭವನ,
ಬೀರಸಂದ್ರ,
ಚಪ್ಪರದಕಲ್ಲು,
ಕುಂದಾಣ ಹೋಬಳಿ,
ದೇವನಹಳ್ಳಿ ತಾಲೂಕು,
ಬೆಂಗಳೂರು ಗ್ರಾಮಾಂತರ ಜಿಲ್ಲೆ- 562110
ಅಭ್ಯರ್ಥಿಗಳು ಅಧಿಸೂಚನೆಯನ್ನು ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











