ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ 4 ಗ್ರಾಮ ಪಂಚಾಯಿತಿಗಳಲ್ಲಿ 4 ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ:
ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ವಿದ್ಯಾರ್ಹತೆ:
ಕನಿಷ್ಟ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಅರ್ಹರು.
ಅರ್ಜಿ ಸಲ್ಲಿಕೆ:
ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಹಾಗೂ ನೆಲಮಂಗಲ ತಾಲ್ಲೂಕಿನ ಕೋಡಿಗೆಹಳ್ಳಿ, ಯಂಟಗಾನಹಳ್ಳಿ ಮತ್ತು ನರಸೀಪುರ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 24,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











