Bangalore Rural Zilla Panchayat Recruitment 2021: 9 ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 9 ತಾಂತ್ರಿಕ ಸಿಬ್ಬಂದಿಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ

ಹುದ್ದೆಗಳ ವಿವರ:

ತಾಲ್ಲೂಕು ಐ.ಇ.ಸಿ ಸಂಯೋಜಕರು - 4 ಹುದ್ದೆಗಳು
ತಾಂತ್ರಿಕ ಸಂಯೋಜಕರು - 3 ಹುದ್ದೆಗಳು
ತಾಂತ್ರಿಕ ಸಹಾಯಕರು - 2 ಹುದ್ದೆಗಳು
ಒಟ್ಟು 9 ಹುದ್ದೆಗಳು

ವಿದ್ಯಾರ್ಹತೆ:

ಬಿ.ಇ/ಎಂ.ಟೆಕ್, ಯುಜಿ/ಪಿಜಿ ಇನ್ ಎಂಎಸ್‌ಡಬ್ಲ್ಯೂ/ಸಮೂಹ ಸಂವಹನ, ಬಿ.ಎಸ್ಸಿ/ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/-ರೂ, ತಾಲ್ಲೂಕು ಐ.ಇ.ಸಿ ಸಂಯೋಜಕರು ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರೂ ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bangalorerural.nic.in/en/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 26,2021ರ ಸಂಜೆ 5 ಗಂಟೆಯೊಳಗೆ ಪೋಸ್ಟ್ ಮೂಲಕ ಅಥವಾ ಮುದ್ದಾಂ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್,
ಜಿಲ್ಲಾಡಳಿತ ಭವನ,
ಬೀರಸಂದ್ರ,
ಕುಂದಾಣ ಹೋಬಳಿ,
ದೇವನಹಳ್ಳಿ ತಾಲ್ಲೂಕು-562110.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Bangalore rural zilla panchayat recruitment 2021 notification has been released for 9 technical staff posts. Interested candidates can apply before March 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X