
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯಲ್ಲಿ 5 ತಜ್ಞ ಮತ್ತು ವೃತ್ತಿಪರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಪೋಸ್ಟ್ ಗ್ರಾಜುಯೇಟ್ ಪದವಿ, ಪದವಿ ಮತ್ತು ಸಿವಿಲ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಪ್ರಾದೇಶಿಕ ಯೋಜನಾ ತಜ್ಞ - ತಿಂಗಳಿಗೆ 30,000/-ರೂ
ಗ್ರಾಮೀಣಾಭಿವೃದ್ಧಿ ಮತ್ತು ನಿರ್ವಹಣಾ ತಜ್ಞ ಮತ್ತು ಎಂಜಿನಿಯರಿಂಗ್ ತಜ್ಞ - ತಿಂಗಳಿಗೆ 25,000/-ರೂ
ಪ್ರಾದೇಶಿಕ ಯೋಜನೆ ವೃತ್ತಿಪರ ಮತ್ತು ಗ್ರಾಮೀಣ ನಿರ್ವಹಣಾ ವೃತ್ತಿಪರ -ತಿಂಗಳಿಗೆ 20,000/-ರೂ
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಲಿಖಿತ ಪರೀಕ್ಷೆ, ಶೈಕ್ಷಣಿಕ ಅರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 20,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ಜಿಲ್ಲಾ ಪಂಚಾಯತ್ ಬೆಂಗಳೂರು ನಗರ,
"ಜಿಲ್ಲಾ ಪಂಚಾಯಿತಿ ಕಛೇರಿ"
ಎಸ್.ಕರಿಯಪ್ಪ ರಸ್ತೆ,
ಬನಶಂಕರಿ,
ಬೆಂಗಳೂರು-560070.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











