ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 31,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಎಂ.ಕಾಂ/ಎಂಬಿಎ ಫಿನಾನ್ಸ್ ವಿದ್ಯಾರ್ಹತೆಯನ್ನು ಹೊಂದಿರುವುದರ ಜೊತೆಗೆ ಕನಿಷ್ಟ 2 ವರ್ಷಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
ವಯೋಮಿತಿ:
ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://bengaluruurban.nic.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಆಗಸ್ಟ್ 31,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.