Bank Of Baroda Recruitment 2021 : 15 ಡೇಟಾ ಸೈಂಟಿಸ್ಟ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾದಲ್ಲಿ 9 ಡೇಟಾ ಸೈಂಟಿಸ್ಟ್ ಮತ್ತು 6 ಡೇಟಾ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 16,2021 ರಿಂದ ಡಿಸೆಂಬರ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಎಂ.ಟೆಕ್/ಎಂ.ಇ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ನವೆಂಬರ್ 1,2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 69,180/- ರಿಂದ 89,890/-ರೂ ವೇತವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bankofbaroda.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 16,2021 ರಿಂದ ಡಿಸೆಂಬರ್ 6,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bank of baroda recruitment 2021 notification has been released for 15 data scientist and engineer posts. Interested candidates can apply before December 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+