ಬ್ಯಾಂಕ್ ಆಫ್ ಬರೋಡಾ (ಬಿಒಬಿ) ದಲ್ಲಿ 325 ಸಂಬಂಧ ವ್ಯವಸ್ಥಾಪಕ ಮತ್ತು ಕ್ರೆಡಿಟ್ ವಿಶ್ಲೇಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 22 ರಿಂದ ಜುಲೈ 12,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Bank of Baroda ನೇಮಕಾತಿ 2022 ವಿದ್ಯಾರ್ಹತೆ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಸಂಬಂಧ ವ್ಯವಸ್ಥಾಪಕ ಮತ್ತು ಕ್ರೆಡಿಟ್ ವಿಶ್ಲೇಷಕ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ, ಸಿಎ, ಸಿಎಫ್ಎ, ಸಿಎಂಎ, ಸಿಎಸ್, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Bank of Baroda ನೇಮಕಾತಿ 2022 ವಯೋಮಿತಿ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಸಂಬಂಧ ವ್ಯವಸ್ಥಾಪಕ ಮತ್ತು ಕ್ರೆಡಿಟ್ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 42 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Bank of Baroda ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಸಂಬಂಧ ವ್ಯವಸ್ಥಾಪಕ ಮತ್ತು ಕ್ರೆಡಿಟ್ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Bank of Baroda ನೇಮಕಾತಿ 2022 ವೇತನ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಸಂಬಂಧ ವ್ಯವಸ್ಥಾಪಕ ಮತ್ತು ಕ್ರೆಡಿಟ್ ವಿಶ್ಲೇಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,60,000/- ರಿಂದ 2,30,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
Bank of Baroda ನೇಮಕಾತಿ 2022 ಅರ್ಜಿ ಶುಲ್ಕ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಸಂಬಂಧ ವ್ಯವಸ್ಥಾಪಕ ಮತ್ತು ಕ್ರೆಡಿಟ್ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Bank of Baroda ನೇಮಕಾತಿ 2022 ಅರ್ಜಿ ಸಲ್ಲಿಕೆ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಸಂಬಂಧ ವ್ಯವಸ್ಥಾಪಕ ಮತ್ತು ಕ್ರೆಡಿಟ್ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bankofbaroda.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 22,2022 ರಿಂದ ಜುಲೈ 12,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











