
ಬ್ಯಾಂಕ್ ಆಫ್ ಇಂಡಿಯಾ 3 ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಮಾರ್ಚ್ 31,2021ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವರೆಗಿನ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bankofindia.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











