Bank Of Maharashtra Recruitment 2019: 300 ಸಾಮಾನ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಮಹಾರಾಷ್ಟ್ರ ಭಾರತದೆಲ್ಲೆಡೆ 300 ಸಾಮಾನ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಬ್ಯಾಂಕ್ ಆಫ್ ಮಹಾರಾಷ್ಟ್ರ ದಲ್ಲಿ 300 ಸಾಮಾನ್ಯ ಅಧಿಕಾರಿ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸಾಮಾನ್ಯ ಅಧಿಕಾರಿ
Organisation ಬ್ಯಾಂಕ್ ಆಫ್ ಮಹಾರಾಷ್ಟ್ರ
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ಸ್ಕೇಲ್-II-ತಿಂಗಳಿಗೆ 31,705/- ರಿಂದ 45,950/-ರೂ ಮತ್ತು ಸ್ಕೇಲ್-III -ತಿಂಗಳಿಗೆ 42,020/- ರಿಂದ 51,490/-ರೂ
Application Start Date December 11, 2019
Application End Date December 31, 2019

ವಿದ್ಯಾರ್ಹತೆ:

ಯಾವುದೇ ವಿಷಯದಲ್ಲಿ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಏಪ್ರಿಲ್ 1,2019ರ ಅನ್ವಯ ಸಾಮಾನ್ಯ ಅಧಿಕಾರಿ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 35 ಮತ್ತು 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಸ್ಕೇಲ್-II ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ಮತ್ತು ಸ್ಕೇಲ್-III ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಐಬಿಪಿಎಸ್ ನಡೆಸುವ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1180/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ಅಧಿಕೃತ ವೆಬ್‌ಸೈಟ್‌ https://www.bankofmaharashtra.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bank of maharashtra recruitment 2019 notification has been released on official website for the recruitment of 300 generalist officer posts. Interested candidates can apply through online before 31st December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+