Bank Of Maharashtra Recruitment 2019: 50 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಮಹಾರಾಷ್ಟ್ರ ಭಾರತದೆಲ್ಲೆಡೆ 50 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಬ್ಯಾಂಕ್ ಆಫ್ ಮಹಾರಾಷ್ಟ್ರ ದಲ್ಲಿ 50 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸ್ಪೆಷಲಿಸ್ಟ್ ಅಧಿಕಾರಿ
Organisation ಬ್ಯಾಂಕ್ ಆಫ್ ಮಹಾರಾಷ್ಟ್ರ
Educational Qualification ಬಿ.ಇ/ಬಿ.ಟೆಕ್, ಎಂಸಿಎ, ಎಂ.ಎಸ್ಸಿ, ಎಂಇ, ಎಂ.ಎಸ್ಸಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 31,705/- ರಿಂದ 45,950/-ರೂ
Application Start Date December 16, 2019
Application End Date December 31, 2019

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಎಂಸಿಎ, ಎಂ.ಎಸ್ಸಿ, ಎಂಇ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮಾರ್ಚ್ 31,2019ರ ಅನ್ವಯ ಸ್ಪೆಷಲಿಸ್ಟ್ ಅಧಿಕಾರಿ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರು ಪಟ್ಟಿಯನ್ನು ಮಾಡಿ ಸಂದರ್ಶನಕ್ಕೆ ಕರೆಯಲಾಗುವುದ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1180/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ಅಧಿಕೃತ ವೆಬ್‌ಸೈಟ್‌ https://www.bankofmaharashtra.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Bank of maharashtra recruitment 2019 notification has been released on official website for the recruitment of 50 specialist officer posts. Interested candidates can apply through online before 31st December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X