Bank of Maharashtra Recruitment 2022 : 500 ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ದಲ್ಲಿ 500 ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾದಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 5,2022 ರಿಂದ ಫೆಬ್ರವರಿ 22,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 500  ಹುದ್ದೆಗಳ ನೇಮಕಾತಿ

Bank of Maharashtra ನೇಮಕಾತಿ 2022 ವಿದ್ಯಾರ್ಹತೆ :

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ನೇಮಕಾತಿಯ ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ಹೊಂದಿರುವ ಅಥವಾ ಸಿಎ/ಸಿಎಂಎ/ಸಿಎಫ್‌ಎ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Bank of Maharashtra ನೇಮಕಾತಿ 2022 ವಯೋಮಿತಿ :

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ನೇಮಕಾತಿಯ ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 31,2022ರ ಅನ್ವಯ ಕನಿಷ್ಟ 25 ರಿಂದ ಸ್ಕೇಲ್ II ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಸ್ಕೇಲ್ III ಹುದ್ದೆಗಳಿಗೆ ಗರಿಷ್ಟ 38 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Bank of Maharashtra ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ನೇಮಕಾತಿಯ ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯನ್ನು ಮಾರ್ಚ್ 12,2022ರಂದು ನಿಗದಿಪಡಿಸಲಾಗಿದೆ.

Bank of Maharashtra ನೇಮಕಾತಿ 2022 ವೇತನ :

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ನೇಮಕಾತಿಯ ಜನರಲಿಸ್ಟ್ ಅಧಿಕಾರಿ ಸ್ಕೇಲ್ II ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 48,170/- ರಿಂದ 69,810/-ರೂ ಮತ್ತು ಜನರಲಿಸ್ಟ್ ಅಧಿಕಾರಿ ಸ್ಕೇಲ್ III ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 63,840/- ರಿಂದ 78,230/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Bank of Maharashtra ನೇಮಕಾತಿ 2022 ಅರ್ಜಿ ಶುಲ್ಕ :

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ನೇಮಕಾತಿಯ ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ಓಬಿಸಿ ಅಭ್ಯರ್ಥಿಗಳು 1,180/-ರೂ ಮತ್ತು ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

Bank of Maharashtra ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ನೇಮಕಾತಿಯ ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bankofmaharashtra.in/current_openings ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 5,2022 ರಿಂದ ಫೆಬ್ರವರಿ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bank of maharashtra (BoM) recruitment 2022 notification has been released for 500 generalist officer scale II III posts. Interested candidates can apply before February 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+