ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನೇರ ಸಂದರ್ಶನದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 27 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನಿಯೋಜಿಸಿಕೊಳ್ಳಲು ಉದ್ದೇಶಿಸಿಕೊಳ್ಳಲಾಗಿದೆ.

ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಅವಶ್ಯವಿರುವ ಭದ್ರತಾ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ನೇರ ಸಂದರ್ಶನದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 27 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನಿಯೋಜಿಸಿಕೊಳ್ಳಲು ಉದ್ದೇಶಿಸಿಕೊಳ್ಳಲಾಗಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೇಮಕಾತಿ

ಹುದ್ದೆಗಳ ವಿವರ

ಭದ್ರತಾ ಸಿಬ್ಬಂದಿ-24 ಹುದ್ದೆಗಳು

ವಿದ್ಯಾರ್ಹತೆ: ನಾಯಕ/ಹವಿಲ್ದಾರ

ಸಂಬಳ

ಡೈರೆಕ್ಟರೇಟ್ ಜನರಲ್ ಆಫ್ ರೀಸೆಟಲ್ಮೆಂಟ್ ಮಿನಿಸ್ಟ್ರಿ, ನವದೆಹಲಿ ಇವರು ನಿಗದಿಪಡಿಸಿದಂತೆ.

ಷರಾ

ಆರೋಗ್ಯವಂತ, ದೃಡಕಾಯ, ಮಧ್ಯಮ ವಯಸ್ಸಿನ ಮಾಜಿ ಸೈನಿಕರು

ಭದ್ರತಾ ಮೇಲ್ವಿಚಾರಕರು-03 ಹುದ್ದೆಗಳು

ವಿದ್ಯಾರ್ಹತೆ: ಸುಬೇದಾರ್/ನಾಯಕ್ ಸುಬೇದಾರ್

ಸಂಬಳ

ಡೈರೆಕ್ಟರೇಟ್ ಜನರಲ್ ಆಫ್ ರೀಸೆಟಲ್ಮೆಂಟ್ ಮಿನಿಸ್ಟ್ರಿ, ನವದೆಹಲಿ ಇವರು ನಿಗದಿಪಡಿಸಿದಂತೆ.

ಷರಾ

ಆರೋಗ್ಯವಂತ, ದೃಡಕಾಯ, ಮಧ್ಯಮ ವಯಸ್ಸಿನ ಮಾಜಿ ಸೈನಿಕರು

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ: 16-10-2017 ರ ಬೆಳಗ್ಗೆ 11:30 ಕ್ಕೆ ಕಚೇರಿ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನಕ್ಕೆ ಹಾಜರಾಗುವಾಗ ಅಭ್ಯರ್ಥಿಯು ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ತರತಕ್ಕದ್ದು.

ಸಂದರ್ಶನ ನಡೆಯುವ ವಿಳಾಸ

ಕಾರ್ಯನಿರ್ವಾಹಕ ನಿರ್ದೇಶಕರ ಕಚೇರಿ
ಬನ್ನೇರುಘಟ್ಟ ಜೈವಿಕ ಉದ್ಯಾನವನ
ಬೆಂಗಳೂರು-83

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8884414246, 8884414268 ಸಂಪರ್ಕಿಸಲು ಸೂಚಿಸಲಾಗಿದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ

ಬೆಂಗಳೂರಿನ ದಕ್ಷಿಣಭಾಗದಲ್ಲಿ ಸುಮಾರು 22 km ದೂರದಲ್ಲಿದೆ. ಝೂವಲಾಜಿಕಲ್ ರಿಸರ್ವ್‌ಗೆ ಅತ್ಯಂತ ಯೋಗ್ಯವಾದ ಅತ್ಯಂತ ಶ್ರೀಮಂತ ನೈಸರ್ಗಿಕ ಪ್ರದೇಶಗಳಲ್ಲೊಂದಾದ ಗುಡ್ಡಗಾಡು ಪ್ರದೇಶವಾಗಿದೆ. 25,000 acre (104.27 km²)ಗಳ ಝೂವಲಾಜಿಕಲ್ ಪಾರ್ಕ್ ಬೆಂಗಳೂರಿನ ಪ್ರವಾಸಿಗರ ಅತ್ಯಂತ ಆಕರ್ಷಣೀಯ ಸ್ಥಳವಾಗಿದೆ.

ಬನ್ನೇರುಘಟ್ಟದ ಅರಣ್ಯ ಪ್ರದೇಶದ ಮುಖ್ಯ ಆಕರ್ಷಣೆಯೇ ಅಲ್ಲಿರುವ ಹುಲಿ ಮತ್ತು ಸಿಂಹಗಳು. ಪ್ರಕೃತಿಯ ಮಡಿಲಲ್ಲಿ ಸಿಂಹಗಳನ್ನು ನೋಡಬಹುದಾದ ಭಾರತದ ಕೆಲವೇ ಪ್ರದೇಶಗಳಲ್ಲಿ ಇದೂ ಒಂದಾಗಿದೆ. ಅರಣ್ಯ ಇಲಾಖೆಯು ಸಿಂಹ ಮತ್ತು ಹುಲಿಗಳ ವೀಕ್ಷಣೆಗಾಗಿ ಸಫಾರಿ ವ್ಯವಸ್ಥೆ ಕಲ್ಪಿಸಿದೆ. ಸಿಂಹಗಳ ಘರ್ಜನೆ ಕೇಳುವುದರೊಂದಿಗೆ ಇತರ ಪ್ರಾಣಿಗಳನ್ನೂ ನೋಡುವ ಸೌಭಾಗ್ಯ ಸಫಾರಿ ಮಾಡುವ ಪ್ರವಾಸಿಗರಿಗೆ ಇಲ್ಲಿ ಸಿಗುವುದು.

ಈ ಉದ್ಯಾನವನದ ಮುಖ್ಯ ಆಕರ್ಷಣೆ ಎಂದರೆ ದೇಶದಲ್ಲೇ ಮೊಟ್ಟ ಮೊದಲನೇಯದಾದ ಚಿಟ್ಟೆಗೆಂದೇ ಇರುವ ಉದ್ಯಾನವನ. 7.5 ಎಕರೆ ವಿಸ್ತೀರ್ಣದಲ್ಲಿ ವಿಶೇಷವೆನ್ನಿಸುವ ಈ ಚಿಟ್ಟೆ ಉದ್ಯಾನವನದಲ್ಲಿ ಚಿಟ್ಟೆಗಳ ಆಕರ್ಷಣೆಗೆಂದೇ ವಿಶಿಷ್ಟ ಉಷ್ಣವಲಯದ ಪರಿಸರ ರೂಪುಗೊಳ್ಳಲೆಂದು ವಿವಿಧ ಜಾತಿಯ ಸಸ್ಯಗಳನ್ನು ನೆಡಲಾಗಿದೆ. ಸುಮಾರು 20 ರೀತಿಯ ವಿವಿಧ ಜಾತಿಯ ಚಿಟ್ಟೆಗಳನ್ನು ಇಲ್ಲಿ ನಾವು ಕಾಣಬಹುದು.

For Quick Alerts
ALLOW NOTIFICATIONS  
For Daily Alerts

English summary
Security personnel are being recruited at Bannerghatta Biological Park.Total27 posts recruiting on contract basis.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X