ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನಲ್ಲಿ ವಿವಿಧ 47 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಜನವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,500/- ರಿಂದ 12,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 150/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ http://www.barc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.