ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ (ಬಿಎಆರ್‌ಸಿ) ನಲ್ಲಿ 266 ಸ್ಟೈಫೆಂಡ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ :
ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ (ಬಿಎಆರ್‌ಸಿ) ನೇಮಕಾತಿಯ ಸ್ಟೈಫೆಂಡ್ ಟ್ರೈನಿ ಹುದ್ದೆಗಳಿಗೆ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ; ಎಸ್‌ಎಸ್‌ಸಿ/ಹೆಚ್ಎಸ್‌ಸಿ ಅಥವಾ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ (ಬಿಎಆರ್‌ಸಿ) ನೇಮಕಾತಿಯ ಸ್ಟೈಫೆಂಡ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಏಪ್ರಿಲ್ 30,2022ರ ಅನ್ವಯ ಕನಿಷ್ಟ 18 ರಿಂದ ಪ್ರವರ್ಗ IIರ ಗರಿಷ್ಟ 22 ವರ್ಷದೊಳಗಿನ ಮತ್ತು ಪ್ರವರ್ಗ Iರ ಗರಿಷ್ಟ 24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ :
ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ (ಬಿಎಆರ್‌ಸಿ) ನೇಮಕಾತಿಯ ಸ್ಟೈಫೆಂಡ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ, ಪೂರ್ವ ಪರೀಕ್ಷೆ, ಅಡ್ವಾನ್ಸ್ಡ್ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :
ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ (ಬಿಎಆರ್‌ಸಿ) ನೇಮಕಾತಿಯ ಸ್ಟೈಫೆಂಡ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 44,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ (ಬಿಎಆರ್‌ಸಿ) ನೇಮಕಾತಿಯ ಸ್ಟೈಫೆಂಡ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ
ಅರ್ಜಿ ಸಲ್ಲಿಸುವುದು ಹೇಗೆ :
ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ (ಬಿಎಆರ್‌ಸಿ) ನೇಮಕಾತಿಯ ಸ್ಟೈಫೆಂಡ್ ಟ್ರೈನಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ http://www.barc.gov.in/careers/recruitment.html ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











