BBMP Recruitment 2019 : ಬಿಬಿಎಂಪಿ 4000 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಹಾಕಿ

ಬಿಬಿಎಂಪಿ ಇಲಾಖೆಯ ನೇಮಕಾತಿಗೆ ಇಂದಿನಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯ ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಗ್ರೂಪ್ "ಡಿ" ವೃಂದದ 4000 ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿತ್ತು. ಈ ಹುದ್ದೆಗಳ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 9,2019 ರಿಂದ ಅಕ್ಟೋಬರ್ 9,2019ರ ರಾತ್ರಿ 11:45 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಬಿಬಿಎಂಪಿ 4000 ಹುದ್ದೆಗಳ ನೇಮಕ : ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ

CRITERIA DETAILS
Name Of The Posts ಪೌರಕಾರ್ಮಿಕ
Organisation ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)
Educational Qualification ಶೈಕ್ಷಣಿಕ ವಿದ್ಯಾರ್ಹತೆಯ ಅಗತ್ಯವಿಲ್ಲ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 17,000/-ರಿಂದ 28,950/-ರೂ
Application Start Date September 9, 2019
Application End Date October 9, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆಯ ಅಗತ್ಯವಿರುವುದಿಲ್ಲ.

ವಯೋಮಿತಿ:

ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಆಭ್ಯರ್ಥಿಗಳಿಗೆ ತಿಂಗಳಿಗೆ 17,000/-ರಿಂದ 28,950/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿದ್ದು, ಶುಲ್ಕದ ವಿವರ ಇಲ್ಲಿದೆ.

* ಪ.ಜಾತಿ ಪ.ಪಂಗಡ, ಪ್ರವರ್ಗ-1ಅಭ್ಯರ್ಥಿಗಳು 100/-ರೂ
* ಇತರೆ ಅಭ್ಯರ್ಥಿಗಳು 200/-ರೂ
* ವಿಕಲ ಚೇತನರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://bbmp.gov.in/en/web/guest/home ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 9,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು ಖುದ್ದಾಗಿ / ಅಂಚೆ /ಇತರೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಿದರೆ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BBMP recruitment 2019 notification has been released on official website for the recruitment of 4000 pourakarmika posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+