ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು (ಬಿಬಿಎಂಪಿ) 42 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಡಿಸೆಂಬರ್ 23,2019ರಂದು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಇಂಜಿನಿಯರ್ |
| Organisation | ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) |
| Educational Qualification | ಬಿ.ಇ ಅಥವಾ ಎಂ.ಟೆಕ್ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 40,000/-ರೂ |
| Application Start Date | December 20, 2019 |
| Application End Date | December 23, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಇಂಜಿನಿಯರ್ ಹುದ್ದೆಗಳಿಗೆ ಬಿ.ಇ ಅಥವಾ ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಬಿಬಿಎಂಪಿ ನೇಮಕಾತಿಯ ಇಂಜಿನಿಯರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ವೇತನದ ವಿವರ:
ಬಿಬಿಎಂಪಿ ನೇಮಕಾತಿಯ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಡಿಸೆಂಬರ್ 23,2019 ರಂದು ಬೆಳಗ್ಗೆ 10 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ:
ಐಪಿಪಿ ಸೆಂಟರ್,
16ನೇ ಅಡ್ಡ ರಸ್ತೆ,
ಚೌಡಯ್ಯ ಮೆಮೋರಿಯಲ್ ಹಾಲ್ ಎದುರು,
ಮಲ್ಲೇಶ್ವರಂ,
ಬೆಂಗಳೂರು-560003.
ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











