ಕರ್ನಾಟಕ ರಾಜ್ಯದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹನಗರ ಪಾಲಿಕೆ, ವೈದ್ಯ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಮಾರ್ಚ್ 30,2020 ರಿಂದ ಏಪ್ರಿಲ್ 1,2020 ರೊಳಗೆ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಬಿಎಂಪಿ ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಘಟಕಗಳಲ್ಲಿ ಕೆಲಸ ನಿರ್ವಹಿಸಲು ನೇಮಕ ಮಾಡಲಾಗುವುದು.
ವಿದ್ಯಾರ್ಹತೆ:
ಬಿಬಿಎಂಪಿ ನೇಮಕಾತಿ ನಿಯಮಾನುಸಾರ ವೈದ್ಯ ಹುದ್ದೆಗಳಿಗೆ ಎಂಬಿಬಿಎಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ವಯೋಮಿತಿ:
ಬಿಬಿಎಂಪಿ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನದ ವಿವರ:
ಅಭ್ಯರ್ಥಿಗಳು ಮಾರ್ಚ್ 30 ರಿಂದ ಏಪ್ರಿಲ್ 1,2020ರ ವರೆಗೆ ಬೆಂಗಳೂರಿನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











