BBMP Recruitment 2021: 120 ಹಿರಿಯ ವೈದ್ಯಾಧಿಕಾರಿಗಳು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 120 ಹಿರಿಯ ವೈದ್ಯಾಧಿಕಾರಿ/ತಜ್ಞರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾರ್ಚ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬಿಬಿಎಂಪಿಯಲ್ಲಿ 120 ಹುದ್ದೆಗಳ ನೇಮಕಾತಿ...ಮಾ.24ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಪೋಸ್ಟ್ ಗ್ರಾಜುಯೇಶನ್/ಡಿಪ್ಲೋಮಾ ಮತ್ತು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಅನ್ವಯ ಕನಿಷ್ಟ 26 ರಿಂದ ಸಾಮಾನ್ಯ ವರ್ಗದ ಗರಿಷ್ಟ 42 ವರ್ಷ, 2ಎ, 2ಬಿ, 3ಎ ಮತ್ತು 3ಬಿಯ ಗರಿಷ್ಟ 45 ವರ್ಷ ಮತ್ತು ಪ.ಜಾ, ಪ.ಪಂ. ಪ್ರವರ್ಗ-1ರ ಗರಿಷ್ಟ 47 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳು ಸೇವಾ ಕೃಪಾಂಕ ಮತ್ತು ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳು 1000/-ರೂ, ಪ್ರವರ್ಗ- 2ಎ. 2ಬಿ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು 500/-ರೂ, ಮಾಜಿ ಸೈನಿಕ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಮಾರ್ಚ್ 25,2021ರೊಳಗೆ ಪಾವತಿಸಬೇಕಿರುತ್ತದೆ. ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಬಿಬಿಎಂಪಿ ಅಧಿಕೃತ ವೆಬ್‌ಸೈಟ್ https://bbmp.gov.in/indexenglish.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BBMP recruitment 2021 notification has been released for 120 sr.medical officers/specialist and GDMO posts. Interested candidates can apply before March 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+