ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆರೋಗ್ಯ ಇಲಾಖೆಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ 30 ವೈದ್ಯಾಧಿಕಾರಿಗಳು, ಹಿರಿಯ ಕ್ಷಯರೋಗಿ ಮೇಲ್ವಿಚಾರಕರು, ಕ್ಷಯರೋಗ ಸಂದರ್ಶಕರು, ಅಕೌಂಟೆಂಟ್, ಕೌನ್ಸಿಲರ್ ಮತ್ತು ಲ್ಯಾಬ್ ಟೆಕ್ನಿಷಿಯನ್ನು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 17,2021 ಮತ್ತು ನವೆಂಬರ್ 18,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ಬಿಬಿಎಂಪಿ ನೇಮಕಾತಿ 2021 ವಿದ್ಯಾರ್ಹತೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ವೈದ್ಯಾಧಿಕಾರಿಗಳು, ಹಿರಿಯ ಕ್ಷಯರೋಗಿ ಮೇಲ್ವಿಚಾರಕರು, ಕ್ಷಯರೋಗ ಸಂದರ್ಶಕರು, ಅಕೌಂಟೆಂಟ್, ಕೌನ್ಸಿಲರ್ ಮತ್ತು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಎಂಬಿಬಿಎಸ್, ಡಿಪ್ಲೋಮಾ/ಎಂಡಿ, ಪದವಿ ಮತ್ತು 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ಬಿಬಿಎಂಪಿ ನೇಮಕಾತಿ 2021 ವಯೋಮಿತಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ವೈದ್ಯಾಧಿಕಾರಿಗಳು, ಹಿರಿಯ ಕ್ಷಯರೋಗಿ ಮೇಲ್ವಿಚಾರಕರು, ಕ್ಷಯರೋಗ ಸಂದರ್ಶಕರು, ಅಕೌಂಟೆಂಟ್, ಕೌನ್ಸಿಲರ್ ಮತ್ತು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.
ಬಿಬಿಎಂಪಿ ನೇಮಕಾತಿ 2021 ವೇತನ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ, ಹಿರಿಯ ಕ್ಷಯರೋಗಿ ಮೇಲ್ವಿಚಾರಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,000/-ರೂ, ಕ್ಷಯರೋಗ ಸಂದರ್ಶಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,850/-ರೂ, ಅಕೌಂಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,697/-ರೂ, ಕೌನ್ಸಿಲರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,283/-ರೂ ಮತ್ತು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000/-ರೂ ವೇತನವನ್ನು ನೀಡಲಾಗುವುದು.
ಬಿಬಿಎಂಪಿ ನೇಮಕಾತಿ 2021 ಸಂದರ್ಶನದ ವಿವರ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ವೈದ್ಯಾಧಿಕಾರಿಗಳು, ಹಿರಿಯ ಕ್ಷಯರೋಗಿ ಮೇಲ್ವಿಚಾರಕರು, ಕ್ಷಯರೋಗ ಸಂದರ್ಶಕರು, ಅಕೌಂಟೆಂಟ್, ಕೌನ್ಸಿಲರ್ ಮತ್ತು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ನವೆಂಬರ್ 17,2021 ಮತ್ತು ನವೆಂಬರ್ 18,2021ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
ಮುಖ್ಯ ಆರೋಗ್ಯಾಧಿಕಾರಿಗಳು,
ಅನೆಕ್ಸ್ ಕಟ್ಟಡ,
ಬಿ.ಬಿ.ಎಂ.ಪಿ ಕೇಂದ್ರ ಕಛೇರಿ,
ಎನ್.ಆರ್.ಚಾಕ,
ಬೆಂಗಳೂರು-02.
ಬಿಬಿಎಂಪಿ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











